ವಿದ್ಯುತ್, ಕುಡಿಯುವ ನೀರಿಗೆ ಶಾಶ್ವತ ಪರಿಹಾರ

ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಚಲುವರಾಜು, ಪುಟ್ಟಸ್ವಾಮಿ, ಶಿವರಾಮು, ಶಿವಮಾದು ಇದ್ದರು.
ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಚಲುವರಾಜು, ಪುಟ್ಟಸ್ವಾಮಿ, ಶಿವರಾಮು, ಶಿವಮಾದು ಇದ್ದರು.
Published on
ಮದ್ದೂರು: ಕ್ಷೇತ್ರದಲ್ಲಿ ಒಂದು ವರ್ಷದೊಳಗೆ ಶಾಶ್ವತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಕೆ.ಹೊನ್ನಲಗೆರೆ, ರಾಜೇಗೌಡನದೊಡ್ಡಿ ಗ್ರಾಮಗಳಲ್ಲಿ ಸೋಮವಾರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಇನ್ನೊಂದು ವರ್ಷದಲ್ಲಿ ತಾಲೂಕಿನ ಕೆ.ಹೊನ್ನಲಗೆರೆ, ಕೆ.ಬೆಳ್ಳೂರು ಹಾಗೂ ಕೂಳಗೆರೆ ಭಾಗಗಳಲ್ಲಿ ತಲೆದೋರಿರುವ ವಿದ್ಯುತ್, ನೀರಾವರಿ ಸಮಸ್ಯೆಗೆ ಶಾಶ್ವತವಾಗಿ ಮುಕ್ತಿ ನೀಡಲಾಗುವುದು ಎಂದರು.
ಕೂಳಗೆರೆ ಗ್ರಾಮದಲ್ಲಿ 66 ಕೆವಿ ಸಬ್ ಸ್ಟೇಷನ್ ಹಾಗೂ ಸೋಮನಹಳ್ಳಿ ಬಳಿ 220 ಕೆವಿ ಸಬ್ ಸ್ಟೇಷನ್ ನಿರ್ಮಾಣ ಮಾಡುತ್ತಿದ್ದು, ಇದರ ಜತೆಗೆ ಬನ್ನಹಳ್ಳಿ ಏತ ನೀರಾವರಿ ಯೋಜನೆಯೂ ಅಂತಿಮ ಹಂತಕ್ಕೆ ತಲುಪಿದ್ದು, ಎರಡು ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಇದರಿಂದ 18 ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ಜಲ ವೃದ್ಧಿಗೆ, ಕುಡಿಯುವ ನೀರು ಹಾಗೂ ಕೃಷಿಗೂ ನೀರಿನ ಸಮಸ್ಯೆ ಉಂಟಾಗುವುದಿಲ್ಲ ಎಂದರು.
ಬೇಸಿಗೆಯಲ್ಲಿ ವಿದ್ಯುತ್, ಕುಡಿಯುವ ನೀರು ಸಮಸ್ಯೆಯಾಗದಂತೆ ಈಗಾಗಲೇ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ. ರೈತರಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಬೇಕು ಹಾಗೂ ಕುಡಿಯುವ ನೀರಿನ ಯೋಜನೆಗೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಭರವಸೆ ನೀಡಿದರು.
ಅಭಿವೃದ್ಧಿಯಿಂದ ವಂಚಿತವಾಗಿರುವ ಗ್ರಾಮಗಳನ್ನು ಆದ್ಯತೆ ಮೇರೆಗೆ ಪಟ್ಟಿ ಮಾಡಿಕೊಂಡು ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಮತ್ತಷ್ಟು ವಿಶೇಷ ಅನುದಾನ ತಂದು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಚಲುವರಾಜು, ಮುಖಂಡರಾದ ಪುಟ್ಟಸ್ವಾಮಿ, ಅಪ್ಪಾಜಿಗೌಡ, ಮತ್ತುರಾಜು, ಬಸವ, ದೇವರಾಜು, ಸಿದ್ದರಾಮು, ಪ್ರಜ್ವಲ್, ಪ್ರದೀಪ್, ಶಿವರಾಮು, ಶಿವಮಾದು, ಕಾಡಯ್ಯ, ವೈರಮುಡಿ, ಕೆಂಪಣ್ಣ, ಅಂಗಡಿ ಕೃಷ್ಣ, ನಾಗೇಶ್, ಕುಮಾರ್, ಸಂತೋಷ್, ನಂಜುಂಡ, ಯತೀಶ್, ಹರೀಶ್, ರವೀಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net