ನಗರಸಭೆಯಲ್ಲಿ ಆಯೋಜಿಸಿದ್ದ ನಗರ ವ್ಯಾಪ್ತಿಯ ಕೆಲಸಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆಗಳ ಮಧ್ಯೆ ಬ್ಯಾನರ್ ಕಟ್ಟುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚು ಇರುತ್ತದೆ. ಆದ್ದರಿಂದ ಪರವಾನಿಗೆ ಇಲ್ಲದೆ ರಸ್ತೆಗಳಲ್ಲಿ ಬ್ಯಾನರ್ ಕಟ್ಟುವವರ ವಿರುದ್ಧ ಕ್ರಮ ಜರುಗಿಸಬೇಕು. ಜತೆಗೆ ಜಿಲ್ಲೆಯಲ್ಲಿ ಬ್ಯಾನರ್ ಮುದ್ರಣ ಮಾಲೀಕರೊಂದಿಗೆ ಸಭೆ ನಡೆಸಿ ಜಾಗೃತಿ ಮೂಡಿಸಿ ಎಂದರು.