ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಟಿ.ಕೆ ಹರೀಶ್ ಮಾತನಾಡಿ, ಕರ್ನಾಟಕದ ಗ್ಯಾರಂಟಿ ಯೋಜನೆಗಳ ಕುರಿತು ಜನರಿಗೆ ಅರಿವು ಮೂಡಿಸಲು, ಛಾಯಾಚಿತ್ರ ಪ್ರದರ್ಶನವನ್ನು ನಮ್ಮ ಇಲಾಖೆಯಿಂದ ಆಯೋಜಿಸಲಾಗಿದ್ದು, ಈ ಪ್ರದರ್ಶನಗಳು ’ಶಕ್ತಿ’, ’ಗೃಹ ಜ್ಯೋತಿ’, ’ಗೃಹ ಲಕ್ಷ್ಮಿ’, ’ಅನ್ನಭಾಗ್ಯ’ ಮತ್ತು ’ಯುವ ನಿಧಿ’ ಯೋಜನೆಗಳ ಅನುಷ್ಠಾನ ಮತ್ತು ಪ್ರಯೋಜನಗಳನ್ನು ಜನರಿಗೆ ತಿಳಿಸಿಕೊಡುವ ಗುರಿಯನ್ನು ಹೊಂದಿವೆ ಎಂದು ತಿಳಿಸಿದರು.