13,824 ಮಕ್ಕಳಿಗೆ ಪೋಲಿಯೋ ಹನಿ ಗುರಿ

ಮದ್ದೂರು ನಗರದ ಸರ್ಕಾರಿ ಬಸ್ ನಿಲ್ದಾಣದ ಸಮೀಪ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಡಾ.ಜಿ.ರವಿಶಂಕರ್, ಶ್ವೇತಾ ಶಶಿಗೌಡ, ಜ್ಯೋತಿ ಗಿರೀಶ್, ಶಶಿಗೌಡ, ಚನ್ನಂಕೇಗೌಡ ಇದ್ದರು.
ಮದ್ದೂರು ನಗರದ ಸರ್ಕಾರಿ ಬಸ್ ನಿಲ್ದಾಣದ ಸಮೀಪ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮಕ್ಕೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ಡಾ.ಜಿ.ರವಿಶಂಕರ್, ಶ್ವೇತಾ ಶಶಿಗೌಡ, ಜ್ಯೋತಿ ಗಿರೀಶ್, ಶಶಿಗೌಡ, ಚನ್ನಂಕೇಗೌಡ ಇದ್ದರು.
Published on
ಮದ್ದೂರು: ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೋ ಹನಿಗಳನ್ನು ಹಾಕಿಸುವ ಮೂಲಕ ಪೋಲಿಯೋ ನಿಮೂರ್ಲನೆ ಮಾಡಬೇಕು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ನಗರದ ಸರ್ಕಾರ ಬಸ್ ನಿಲ್ದಾಣದ ಸಮೀಪ ಭಾನುವಾರ ಆರೋಗ್ಯ ಇಲಾಖೆ ಹಾಗೂ ಇನ್ನರ್ ವ್ಹೀಲ್ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ತಾಲೂಕಿನಲ್ಲಿ 13,824 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿದೆ. ನಗರ ಸೇರಿದಂತೆ ತಾಲೂಕಿನಾದ್ಯಂತ ಸುಮಾರು 113 ಬೂತ್‌ಗಳನ್ನು ತೆರೆದು 460 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು.
ಅಭಿಯಾನದ ಮೊದಲ ದಿನ ಬೂತ್‌ಗಳ ಮೂಲಕ ಹನಿ ನೀಡಲಾಗುತ್ತದೆ. ನಂತರದ ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆಗಳಿಗೆ ಭೇಟಿ ಮಕ್ಕಳಿಗೆ ಹನಿಗಳನ್ನು ಹಾಕುತ್ತಾರೆ. ಪಾಲಕರು ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಜಿ.ರವಿಶಂಕರ್, ಇನ್ನರ್ ವ್ಹೀಲ್ ಅಧ್ಯಕ್ಷೆ ಶ್ವೇತಾ ಶಶಿಗೌಡ, ಸಹ ಕಾರ್ಯದರ್ಶಿ ಜ್ಯೋತಿ ಗಿರೀಶ್, ರೋಟರಿ ಮಾಜಿ ಅಧ್ಯಕ್ಷ ಶಶಿಗೌಡ, ಚನ್ನಂಕೇಗೌಡ, ಸದಸ್ಯರಾದ ಮಹೇಶ್, ಯೋಗೇಶ್, ಪ್ರತಾಪ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net