ಧರ್ಮಸ್ಥಳ ಯೋಜನೆ ಕಾರ್ಯಗಳಿಗೆ ಪ್ರಶಂಸೆ

ಮದ್ದೂರು ತಾಲೂಕು ಚಾಮನಹಳ್ಳಿಯ ಅಂಬಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ಶನೈಶ್ಚರಸ್ವಾಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷ ಸಿ.ಕೆ.ಸತೀಶ್ ಉದ್ಘಾಟಿಸಿದರು. ಶ್ರೀ ಸಿದ್ಧರಾಮಚೈತನ್ಯ ಸ್ವಾಮೀಜಿ, ಎಂ.ಎ.ಹಾಲಪ್ಪ, ಸಿ.ಆರ್.ರಾಜು, ಮುನಿಯಪ್ಪ ಇತರರಿದ್ದರು.
ಮದ್ದೂರು ತಾಲೂಕು ಚಾಮನಹಳ್ಳಿಯ ಅಂಬಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ಶನೈಶ್ಚರಸ್ವಾಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷ ಸಿ.ಕೆ.ಸತೀಶ್ ಉದ್ಘಾಟಿಸಿದರು. ಶ್ರೀ ಸಿದ್ಧರಾಮಚೈತನ್ಯ ಸ್ವಾಮೀಜಿ, ಎಂ.ಎ.ಹಾಲಪ್ಪ, ಸಿ.ಆರ್.ರಾಜು, ಮುನಿಯಪ್ಪ ಇತರರಿದ್ದರು.
Published on
ಮದ್ದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳು ಪ್ರಶಂಸನೀಯ ಎಂದು ಕುಣಿಗಲ್ ಅರೆಶಂಕರ ಮಠದ ಶ್ರೀ ಸಿದ್ಧರಾಮಚೈತನ್ಯ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲೂಕಿನ ಚಾಮನಹಳ್ಳಿಯ ಅಂಬಿ ಸಮುದಾಯ ಭವನದಲ್ಲಿ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ಶನೈಶ್ಚರಸ್ವಾಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಮಹಿಳಾ ಸಬಲೀಕರಣಕ್ಕೆ ಪೂರಕವಾಗಿ ಹುಟ್ಟುಹಾಕಿದ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯು ಸರ್ಕಾರ ಮಾಡದ ಅನೇಕ ಯೋಜನೆ ಮಾಡುತ್ತಿರುವ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
84 ಕೋಟಿ ಜೀವರಾಶಿಗಳಲ್ಲಿ ಮನುಷ್ಯ ಜನ್ಮ ಪುಣ್ಯವಾಗಿದೆ. ಹೀಗಾಗಿ ಮಾನವ ಜನ್ಮದಲ್ಲಿ ಉತ್ತಮ ನಡೆ-ನುಡಿ ಸರಳತೆಯನ್ನು ಅಳವಡಿಸಿಕೊಂಡು ಮಾದರಿಯಾಗಿ ಬದುಕಬೇಕು. ತಾಯಿಯೇ ಮೊದಲ ಗುರು ಎಂಬಂತೆ ನಮ್ಮ ಮಕ್ಕಳನ್ನು ಒಳ್ಳೆಯ ದಾರಿಯಲ್ಲಿ ಬೆಳೆಸುವಲ್ಲಿ ಶಿಕ್ಷಕರಂತೆ ಮಕ್ಕಳಿಗೆ ಸಲಹೆ ನೀಡಬೇಕೆಂದರು.
ನಿವೃತ್ತ ಪ್ರಾಂಶುಪಾಲ ಸಿ.ಆರ್.ರಾಜು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯು ಮಹಿಳಾ ಸಬಲೀಕರಣ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಜತೆಗೆ, ಮುಂದಿನ ಜನಾಂಗದ ಉತ್ತಮ ಪ್ರಜೆಗಳಿಗಾಗಿ ಸಂಸ್ಕೃತಿ- ಸಂಸ್ಕಾರ ಹಾಗೂ ಧಾರ್ಮಿಕ ನಂಬಿಕೆಗಳ ಬಗ್ಗೆ ಅಪಾರ ಗೌರವ ಹಾಗೂ ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಇಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶದಲ್ಲಿ ಹಮ್ಮಿಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ರಕ್ಷಾ ಮೊತ್ತ 16000 ರೂ. ಮತ್ತು ಪ್ರಗತಿ ರಕ್ಷಾ ಕವಚ 70000 ರೂ. ಮಂಜೂರಾತಿ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಪೂಜಾ ಸಮಿತಿ ಅಧ್ಯಕ್ಷ ಕೃಷ್ಣ, ಗ್ರಾಪಂ ಅಧ್ಯಕ್ಷ ಸಿ.ಕೆ.ಸತೀಶ್, ತಾಲೂಕಿನ ಯೋಜನಾಧಿಕಾರಿ ಎಂ.ಎ.ಹಾಲಪ್ಪ, ಮುಖ್ಯ ಅತಿಥಿಗಳಾಗಿ ಮುನಿಯಪ್ಪ, ಶ್ರೀನಿವಾಸ, ಜಯರತ್ನಾ, ಸವಿತಾ, ಪ್ರತಿಭಾ, ಸಾಮೂಹಿಕ ಶ್ರೀ ಶನೈಶ್ಚರ ಸ್ವಾಮಿ ಪೂಜಾ ಸಮಿತಿಯ ಉಪಾಧ್ಯಕ್ಷರು ಮತ್ತು ಸದಸ್ಯರು, ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net