ಶೀಘ್ರ ದಾಖಲೆ ಬಿಡುಗಡೆ
ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷದಲ್ಲಿ ನೀಡಿರುವ ಅನುದಾನದ ಬಗ್ಗೆ ಜೆಡಿಎಸ್‌ನವರು ಲೇವಡಿ ಮಾಡಿದ್ದಾರೆ. ನಮ್ಮ ಸರ್ಕಾರ ಅಂದಾಜು 10 ಸಾವಿರ ಕೋಟಿ ರೂಗಳನ್ನು ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ನೀಡಿದೆ. ಶೀಘ್ರವೇ ದಾಖಲೆಯನ್ನೂ ಬಿಡುಗಡೆ ಮಾಡುತ್ತೇವೆ ಎಂದು ಸಿ.ಡಿ.ಗಂಗಾಧರ ಹೇಳಿದರು.
ಅಭಿವೃದ್ಧಿಗಳ ಮಾಹಿತಿ ಕೋರಿ ಕೇಂದ್ರ ಸಚಿವ ಎಚ್‌ಡಿಕೆ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವುದನ್ನು ಸ್ವಾಗತಿಸುತ್ತೇವೆ. ಆದರೆ ಅವರು 2018ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಜೆಡಿಎಸ್‌ನ ಏಳು ಶಾಸಕರನ್ನು ಜಿಲ್ಲೆಯ ಜನರು ಆಯ್ಕೆ ಮಾಡಿದ್ದರು. ಆ ದಿನಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನೂ ಕೂಡ ಅವರು ಜನತೆಯ ಮುಂದೆ ಇಡಬೇಕು. ಯಾವಾಗಲೂ ಎಂಟು ಸಾವಿರ ಕೋಟಿ ರೂ ಬಗ್ಗೆ ಪ್ರಸ್ತಾಪ ಮಾಡುವುದು ಜಿಲ್ಲೆಯ ಜನತೆಗೆ ದ್ರೋಹ ಬಗೆದಂತಾಗಿದೆ. ಇದಕ್ಕೆ ಸಂಬಂಧಿಸಿದಂತೆ ಬಜೆಟ್, ಕ್ಯಾಬಿನೆಟ್, ಅಧಿವೇಶನದಲ್ಲಿ ಅನುಮೋದನೆಯಾಗಿರುವ ದಾಖಲೆ ಬಿಡುಗಡೆ ಮಾಡಬೇಕು ಎಂದು ಸವಾಲು ಹಾಕಿದರು.