ಮಾ.24ರಂದು ಪ್ರಶಸ್ತಿ ಪ್ರದಾನ ಸಮಾರಂಭ: ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ ಮಾಹಿತಿ

ಮಂಡ್ಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಶಸ್ತಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ವಿಜಯಲಕ್ಷ್ಮೀ ದೇಶಮಾನೆ ಆಯ್ಕೆ
  • ಕೆ.ಎಂ.ದೊಡ್ಡಿಯ ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸಮಾರಂಭ
ಮಂಡ್ಯ: ಪದ್ಮಾ ಜಿ.ಮಾದೇಗೌಡ ಪ್ರತಿಷ್ಠಾನದ ವತಿಯಿಂದ 12ನೇ ವರ್ಷದ ಪದ್ಮಾ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಮಾ.24ರಂದು ಬೆಳಗ್ಗೆ 10.30ಕ್ಕೆ ಮದ್ದೂರು ತಾಲೂಕು ಕೆ.ಎಂ.ದೊಡ್ಡಿಯ ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ ತಿಳಿಸಿದರು.
ಕ್ಯಾನ್ಸರ್ ತಜ್ಞೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ವಿಜಯಲಕ್ಷ್ಮೀ ದೇಶಮಾನೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಕರ್ನಾಟಕ ಸಂಘದ ಅಧ್ಯಕ್ಷ ಡಾ.ಬಿ.ಜಯಪ್ರಕಾಶಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಶಸ್ತಿ ಪ್ರದಾನ ಮಾಡುವರು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ವಿಧಾನ ಪರಿಷತ್ ಸದಸ್ಯ, ಮಹಾತ್ಮಗಾಂಧಿ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷ ಮಧು ಜಿ.ಮಾದೇಗೌಡ ಉಪಸ್ಥಿತಿ ವಹಿಸುವರು. ಪದ್ಮಾ ಜಿ.ಮಾದೇಗೌಡ, ಬಿಇಟಿ ಸಿಇಒ ಜಿ.ಎಂ.ಆಶಯ್ ಉಪಸ್ಥಿತರಿರುವರು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಜಿ.ಬಿ.ಪಲ್ಲವಿ, ಪ್ರತಿಷ್ಠಾನದ ಮಹಿಳಾ ಕೋಶದ ಸಹ ಸಂಚಾಲಕಿ ಎಚ್.ಡಿ.ಪ್ರತಿಮಾ, ಸದಸ್ಯರಾದ ಡಾ.ಕುಮುದಾ ಮಯೂರ್, ಎಸ್.ಗೀತಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net