ಮಾ.22ರಂದು ನಗರದಲ್ಲಿ ಯುಗಾದಿ ಕವಿಗೋಷ್ಠಿ: ಟ್ರಸ್ಟ್ ಅಧ್ಯಕ್ಷ ಕೆ.ಟಿ.ಹನುಮಂತು ಮಾಹಿತಿ

ಮಂಡ್ಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಕೆ.ಟಿ.ಹನುಮಂತು ಮಾತನಾಡಿದರು.
ಮಂಡ್ಯದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಕೆ.ಟಿ.ಹನುಮಂತು ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಮಹಿಳೆಯರಿಗೆ ರಂಗೋಲಿ ಹಾಗೂ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ
  • ವಿಜೇತರಿಗೆ ವಿಶೇಷ ಬಹುಮಾನ
ಮಂಡ್ಯ: ಕೆಟಿಎಚ್ ಕನ್ನಡ ಬಳಗ ಹಾಗೂ ನಂಜಮ್ಮ ಮೋಟೆಗೌಡ ಚಾರಿಟಬಲ್ ಮತ್ತು ಎಜುಕೇಷನಲ್ ಟ್ರಸ್ಟ್ ವತಿಯಿಂದ ವಿಶ್ವಕವಿಗಳ ದಿನದ ಅಂಗವಾಗಿ ಮಾ.22ರಂದು ಸಂಜೆ 4.30ಕ್ಕೆ ನಗರದ ಗಾಂಧಿಭವನದಲ್ಲಿ ಯುಗಾದಿ ಕವಿಗೋಷ್ಠಿ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೆ.ಟಿ.ಹನುಮಂತು ತಿಳಿಸಿದರು.
ಜಿಲ್ಲೆಯ ಹೊಸ ತಲೆಮಾರಿನ ಕವಿಗಳು ವಸಂತಕಾಲದ ಪದ್ಯ, ನಿಸರ್ಗದ ಋತು ಬದಲಾವಣೆ ಮತ್ತು ಜನ ಸಾಮಾನ್ಯರ ನೋವು ನಲಿವುಗಳನ್ನು ಸಶಕ್ತವಾಗಿ ಕಟ್ಟಿಕೊಡಬಲ್ಲ ಸಾಹಿತಿಗಳ ಶೋಧಕ್ಕಾಗಿ ಕವಿಗೋಷ್ಠಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಂದಿನ ಕಾರ್ಯಕ್ರಮವನ್ನು ಚಿತ್ರ ಸಾಹಿತಿ ಡಾ.ವಿ.ನಾಗೇಂದ್ರಪ್ರಸಾದ್ ಉದ್ಘಾಟಿಸುವರು. ಕರ್ನಾಟಕ ಲೇಖಕಿಯರ ಸಂಘದ ನಿಕಟಪೂರ್ವ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪಾ ದಿಕ್ಸೂಚಿ ಭಾಷಣ ಮಾಡುವರು. ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಸಂಘದ ಅಧ್ಯಕ್ಷ ಡಾ.ಬಿ.ಜಯಪ್ರಕಾಶಗೌಡ, ಕಸಾಪ ಮಾಜಿ ಜಿಲ್ಲಾಧ್ಯಕ್ಷರಾದ ಡಾ.ಮೀರಾಶಿವಲಿಂಗಯ್ಯ, ಪ್ರೊ.ಜಿ.ಟಿ.ವೀರಪ್ಪ, ಡಾ.ಎಚ್.ಎಸ್.ಮುದ್ದೇಗೌಡ, ಕನ್ನಿಕಾಶಿಲ್ಪಾ ನವೋದಯ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎಚ್.ಆರ್.ಕನ್ನಿಕಾ, ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಷ ಎಂ.ವಿನಯ್‌ಕುಮಾರ್, ಸಾಹಿತಿ ಡಾ.ಹುಸ್ಕೂರು ಕೃಷ್ಣೇಗೌಡ, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿಯ ಡೇವಿಡ್, ಚಿಂತಕ ಧನಂಜಯ ದರಸಗುಪ್ಪೆ ಉಪಸ್ಥಿತರಿರುವರು ಎಂದು ವಿವರಿಸಿದರು.
ಯುಗಾದಿ ಸಂಭ್ರಮದ ಅಂಗವಾಗಿ ಅಂದು ಬೆಳಗೆ 7ರಿಂದ ಮಧ್ಯಾಹ್ನ 12ವರೆಗೆ ಮಹಿಳೆಯರಿಗೆ ರಂಗೋಲಿ ಹಾಗೂ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಮೊದಲ ಬಹುಮಾನ 5000 ರೂ, ದ್ವಿತೀಯ 3000 ರೂ ಹಾಗೂ ತೃತೀಯ 2000 ರೂ ಬಹುಮಾನ ಮತ್ತು ಸಾಂಪ್ರದಾಯಿಕ ಉಡುಗೆ ಸ್ಪರ್ಧೆಗೂ ಪ್ರತ್ಯೇಕ ಬಹುಮಾನ ನೀಡಲಾಗುವುದು ಎಂದು ಹೇಳಿದರು.
ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಷ ಎಂ.ವಿನಯ್‌ಕುಮಾರ್, ಪಿ.ಲೋಕೇಶ್ ಚಂದಗಾಲು, ಧನಂಜಯ ದರಸಗುಪ್ಪೆ, ಕೃಷ್ಣಪ್ಪ, ಲೋಕೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net