ಮದ್ದೂರು: ನಗರ ಸೇರಿದಂತೆ ಗ್ರಾಮಾಂತರ ಭಾಗದ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ನಗರದ ಸಿದ್ದಾರ್ಥ ನಗರದ 2 ನೇ ಕ್ರಾಸ್ ಮತ್ತು 3 ನೇ ಕ್ರಾಸ್‌ನಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ರಸ್ತೆಗಳು ಅಭಿವೃದ್ಧಿಯ ಸಂಕೇತವಾಗಿದ್ದು, ರಸ್ತೆಗಳನ್ನು ನಿರ್ಮಿಸಿದರೆ ಸ್ಥಳೀಯರ ಸುಗಮ ಸಂಚಾರದ ಜತೆಗೆ ಆರ್ಥಿಕ ಅಭಿವೃದ್ಧಿಗೂ ಸಹಕಾರಿ ಆಗಲಿದೆ. ಈ ಹಿನ್ನೆಲೆಯಲ್ಲಿ ರಸ್ತೆಗಳ ಅಬಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.
ತಾಲೂಕಿನ ಪ್ರತಿಯೊಂದು ಗ್ರಾಮಕ್ಕೂ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರದಿಂದ ವಿಶೇಷ ಅನುದಾನ ತಂದು ಕ್ರಮ ಕೈಗೊಳ್ಳಲಾಗಿದೆ ಎಂದರು. ಮುಖಂಡರಾದ ಇಂತಿಯಾಜ್‌ವುಲ್ಲಾ ಖಾನ್, ಸಿದ್ದರಾಜು, ವಿಠಲ್, ನಟರಾಜು, ಸಿದ್ದರಾಜು, ರಘು, ರಾಜೇಶ್, ಆದೇಶ್ ಮಹದೇವ ಇತರರು ಇದ್ದರು.