ನಾಲೆಗಳ ರಸ್ತೆ ಅಭಿವೃದ್ಧಿಗೆ ಆದ್ಯತೆ

ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿ ಪೂಜೆ ನೆರವೇರಿಸಿದರು. ಮಮತಾ ಶಂಕರೇಗೌಡ, ಶಂಕರೇಗೌಡ, ಚಿಕ್ಕಮರಿಯಪ್ಪ, ಪುಟ್ಟರಾಜು, ಉಮೇಶ್ ಇದ್ದರು.
ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಕೆ.ಎಂ.ಉದಯ್ ಭೂಮಿ ಪೂಜೆ ನೆರವೇರಿಸಿದರು. ಮಮತಾ ಶಂಕರೇಗೌಡ, ಶಂಕರೇಗೌಡ, ಚಿಕ್ಕಮರಿಯಪ್ಪ, ಪುಟ್ಟರಾಜು, ಉಮೇಶ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ. ಉದಯ್ ಅಭಿಮತ
ಮದ್ದೂರು: ತಾಲೂಕಿನಲ್ಲಿ ನಾಲೆಗಳು ಹಾಗೂ ಗದ್ದೆಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ವಳಗೆರೆಹಳ್ಳಿ, ಸೊಳ್ಳೆಪುರ, ಚಾಪುರದೊಡ್ಡಿ, ದೇಶಹಳ್ಳಿ, ಚಾಮನಹಳ್ಳಿ ಗ್ರಾಮಗಳಲ್ಲಿ ಅಂದಾಜು 2 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೂ ರಸ್ತೆಗಳು, ಚರಂಡಿಗಳು, ನಾಲೆಗಳು, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು, ಹಂತ ಹಂತವಾಗಿ ಎಲ್ಲ ಗ್ರಾಮಗಳಲ್ಲೂ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು.
ಈಗಾಗಲೇ ತಾಲೂಕಿನ ಮದ್ದೂರಮ್ಮನಕೆರೆ, ಸೂಳೆಕೆರೆ, ಸೋಮನಹಳ್ಳಿ ಕೆರೆಗಳನ್ನು ಅಭಿವೃದ್ಧಿಪಡಿಸಲು ಮುಂದಾಗಿದ್ದು, ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲ ಕೆರೆಗಳ ಒತ್ತುವರಿ ತೆರವುಗೊಳಿಸಿ, ಹೂಳು ತೆಗೆಸಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಕೆಲಸಗಾರರ ಕೊರತೆಯಿಂದ ಮದ್ದೂರು ನಗರದ ಕೆಮ್ಮಣ್ಣುನಾಲೆ ಕಾಮಗಾರಿ ಸ್ವಲ್ಪ ವಿಳಂಬವಾಗಿತ್ತು. ಇನ್ನೊಂದು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ರೈತರಿಗೆ ಅನುಕೂಲವಾಗಲಿದೆ ಹಾಗೂ ಬೈರನ್, ವೈದ್ಯನಾಥಪುರ ಹಾಗೂ ಚಾಮನಹಳ್ಳಿ ನಾಲೆಗಳ ಆಧುನಿಕರಣ ಕಾಮಗಾರಿಯೂ ಶೀಘ್ರ ಆರಂಭಗೊಳ್ಳಲಿದೆ ಎಂದರು.

ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಕಿಶಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಶಂಕರೇಗೌಡ, ತಾಪಂ ಮಾಜಿ ಸದಸ್ಯ ಚಿಕ್ಕಮರಿಯಪ್ಪ, ಮುಖಂಡರಾದ ಪುಟ್ಟರಾಜು, ಶಂಕರೇಗೌಡ, ಉಮೇಶ್, ಸುನಿಲ್, ದಿನೇಶ್, ನಿತಿನ್, ವಿನಯ್, ಚಂದ್ರಶೇಖರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net