ಗ್ರಾಮಾಂತರ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಆದ್ಯತೆ

ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದ ಪರಿಶಿಷ್ಟ ಕಾಲನಿಯ 40 ಲಕ್ಷ ರೂ.ಗಳ ರಸ್ತೆ ಅಭಿವೃದ್ದಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ರಾಜೀವ್, ಹಿತೇಶ್‌ಕುಮಾರ್, ಸಿಪಾಯಿ ಶ್ರೀನಿವಾಸ್, ನಯನ, ನಾಗೇಶ್, ಮಧುಕುಮಾರ್, ಶ್ರೀಧರ್ ಇದ್ದರು.
ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದ ಪರಿಶಿಷ್ಟ ಕಾಲನಿಯ 40 ಲಕ್ಷ ರೂ.ಗಳ ರಸ್ತೆ ಅಭಿವೃದ್ದಿಗೆ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು. ರಾಜೀವ್, ಹಿತೇಶ್‌ಕುಮಾರ್, ಸಿಪಾಯಿ ಶ್ರೀನಿವಾಸ್, ನಯನ, ನಾಗೇಶ್, ಮಧುಕುಮಾರ್, ಶ್ರೀಧರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಉದಯ್ ಹೇಳಿಕೆ
ಮದ್ದೂರು: ಗ್ರಾಮಾಂತರ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಕುದರಗುಂಡಿ ಗ್ರಾಮದ ಪರಿಶಿಷ್ಟ ಕಾಲನಿಯ 40 ಲಕ್ಷ ರೂ.ಗಳ ರಸ್ತೆ ಅಭಿವೃದ್ಧಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
ರಸ್ತೆಗಳು ಅಭಿವೃದ್ಧಿಯ ಸಂಕೇತವಾಗಿದ್ದು, ರಸ್ತೆಗಳು ನಿರ್ಮಾಣ ಮಾಡಿದರೆ ಜನರಿಗೆ ಅನುಕೂಲವಾಗುವ ಜತೆಗೆ ಆರ್ಥಿಕವಾಗಿಯೂ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಎರಡುವರೆ ವರ್ಷಗಳ ಅವಧಿಯಲ್ಲಿ ಸರ್ಕಾರದಿಂದ 1800 ಕೋಟಿ ರೂ.ಅಧಿಕ ಅನುದಾನ ತಂದು ನೀರಾವರಿ, ಶಿಕ್ಷಣ, ಕೃಷಿ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ತಂದು ತಾಲೂಕಿನ ಸರ್ವತೋಮುಖ ಅಭಿವೃದ್ಧಿ ಮಾಡಲಾಗುವುದು ಎಂದರು.
ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜೀವ್, ಮುಖಂಡರಾದ ಹಿತೇಶ್, ಧ್ರುವಕುಮಾರ್,ನಾಗೇಶ್, ನಯನ, ಮಧುಕುಮಾರ್, ಶ್ರೀಧರ್, ಸತೀಶ್, ಜಯರಾಮು, ಮಾಜಿ ಸೈನಿಕ ಸಿಪಾಯಿ ಶ್ರೀನಿವಾಸ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net