ರೈತರ ಸಮಸ್ಯೆ ಇತ್ಯರ್ಥಕ್ಕೆ ಆದ್ಯತೆ

ಮದ್ದೂರು ತಾಲೂಕಿನ ಆತಗೂರಿನಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ನಡೆಯಿತು. ಡಾ.ಶಿವಕುಮಾರ್ ಬಿರಾದಾರ್, ರಾಮಲಿಂಗಯ್ಯ, ಧನಂಜಯ, ಪರಮೇಶ್, ಡಾ.ರವಿಶಂಕರ್ ಇದ್ದರು.
ಮದ್ದೂರು ತಾಲೂಕಿನ ಆತಗೂರಿನಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ನಡೆಯಿತು. ಡಾ.ಶಿವಕುಮಾರ್ ಬಿರಾದಾರ್, ರಾಮಲಿಂಗಯ್ಯ, ಧನಂಜಯ, ಪರಮೇಶ್, ಡಾ.ರವಿಶಂಕರ್ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ ಹೇಳಿಕೆ
ಮದ್ದೂರು: ಸಾರ್ವಜನಿಕರ ಹಾಗೂ ರೈತರ ಸಮಸ್ಯೆಗಳನ್ನು ಶೀಘ್ರ ಬಗೆ ಹರಿಸಬೇಕೆಂಬ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನ ಹಮ್ಮಿಕೊಂಡಿದ್ದು, ಸಭೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಆಗಮಿಸುವುದರಿಂದ ಪ್ರತಿಯೊಬ್ಬರೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ ತಿಳಿಸಿದರು.
ತಾಲೂಕಿನ ಆತಗೂರಿನಲ್ಲಿ ಶನಿವಾರ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಉದ್ಘಾಟಿಸಿ ಮಾತನಾಡಿದರು.
ಮುಂದಿನ ವಾರ ಬೆಸಗರಹಳ್ಳಿಯಲ್ಲಿ ಪ್ರಜಾಸೇವಾ ಆಂದೋಲನ ಸಭೆ ಹಮ್ಮಿಕೊಳ್ಳಲಾಗಿದೆ. ಆ ಭಾಗದ ಜನರು ಸಭೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ತಾಲೂಕು ಪಂಚಾಯಿತಿ ಇಒ ರಾಮಲಿಂಗಯ್ಯ ಮಾತನಾಡಿ, ಜನರ ಬಳಿಗೆ ಹೋಗಿ ಹಲವು ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಅವರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಸ್ಥಳದಲ್ಲಿಯೇ ಬಗೆಹರಿಸಲು ಪ್ರಯತ್ನಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.
ನಿಡಘಟ್ಟ ಗ್ರಾ.ಪಂ. ಮಾಜಿ ಅಧ್ಯಕ್ಷ ಎನ್.ಆರ್.ಪ್ರಕಾಶ್ ಮಾತನಾಡಿ, ಗ್ರಾಮಕ್ಕೆ ಹಿಂದಿನಿಂದಲೂ ಸಾರ್ವಜನಿಕ ಸ್ಮಶಾನ ಇಲ್ಲದೆ ಜನರಿಗೆ ತೊಂದರೆಯಾಗಿದ್ದು, ಕೂಡಲೇ ಸಮಸ್ಯೆ ಬಗೆಹರಿಸಬೇಕು ಹಾಗೂ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ತಹಸೀಲ್ದಾರ್ ಶಿವಕುಮಾರ್ ಬಿರಾದಾರ್‌ಗೆ ಅಹವಾಲು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬಿಇಒ ಧನಂಜಯ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಪರಮೇಶ್, ತಾಲೂಕು ವೈದ್ಯಾಧಿಕಾರಿ ಡಾ.ರವಿಶಂಕರ್, ಪಶುಸಂಗೋಪನಾಧಿಕಾರಿ ಡಾ.ಗೋವಿಂದ್, ಸೆಸ್ಕ್ ಇ.ಇ ಶಿವಕುಮಾರ್, ಕೆಸ್ತೂರು ಪಿಎಸ್‌ಐ ಭರತ್ ರೆಡ್ಡಿ, ತಾಲೂಕು ಭೂಮಾಪನಾ ಇಲಾಖೆಯ ಎಡಿಎಲ್‌ಆರ್ ಲಿಖಿತಾ, ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net