ಮಂಡ್ಯ: ನಿರುದ್ಯೋಗ ಮತ್ತು ವ್ಯವಸ್ಥೆಯ ವಿರುದ್ಧದ ವಿಡಂಬತಾನ್ಮಕ ಚಳವಳಿಯಾಗಿ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಕಲ್ಪಿತ ಕಾರ್ಯಕ್ರಮ ಆಯೋಜಿಸಿದ್ದರು.
ಜಿಲ್ಲಾ ಬಿಜೆಪಿ ಜಿಲ್ಲಾ ಕಚೇರಿ ಆವರಣದಲ್ಲಿ ಜಿರಳೆ ಹೊಸಕಿ ಹಾಕುವ ಕಲ್ಪಿತ ಪ್ರದರ್ಶನ ಮಾಡಲಾಯಿತು. ಮುಖಂಡ ಶಿವಕುಮಾರ್ ಆರಾಧ್ಯ ಮಾತನಾಡಿ, ದೇಶವನ್ನು ಹಾಳು ಮಾಡುವ ಉದ್ದೇಶದಿಂದ ಯಾವುದೋ ಮೂಲೆಯಲ್ಲಿ ಕುಳಿತು ಜಿರಳೆ ಹೆಸರಿನಲ್ಲಿ ಪಕ್ಷ ಸ್ಥಾಪಿಸಿ ಅಶಾಂತಿ ಉಂಟು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಮನೆಯಲ್ಲಿರುವ ಜಿರಳೆಯನ್ನು ಹೊಸಕಿ ಹಾಕುತ್ತೇವೆ. ಅಂತಹ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿರುವುದು ಸರಿಯಲ್ಲ. ಅದಕ್ಕೆ ಬೆಂಬಲ ನೀಡುವ ಮಾತನ್ನು ಹೇಳಿರುವ ಕಾಂಗ್ರೆಸ್ ನಡೆ ದೇಶದಲ್ಲಿ ತುಂಬಾ ಅಪಾಯಕಾರಿ ಎಂಬುದನ್ನು ಮತ್ತೊಮ್ಮೆ ಜಿರಳೆ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಅಪಹಾಸ್ಯಕ್ಕೀಡಾಗಿದ್ದಾರೆ ಎಂದು ಕಿಡಿಕಾರಿದರು.