ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿನ ಪೂರೈಕೆ, ಜಲಜೀವನ್ ಮಿಷನ್ ಯೋಜನೆಗಳ ಪ್ರಗತಿ ಮತ್ತು ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಗಮನಹರಿಸಬೇಕು. ಮುಖ್ಯವಾಗಿ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಮುಂಜಾಗ್ರತೆ ಕ್ರಮವಾಗಿ ಪರೀಕ್ಷೆಗೊಳಪಡಿಸಿಯೇ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ತೀವ್ರ ಸಮಸ್ಯೆ ಇರುವ ಗ್ರಾಮಗಳಿಗೆ ಆದ್ಯತೆ ಮೇರೆಗೆ ಟ್ಯಾಂಕರ್ ಮೂಲಕ ನೀರು ಒದಗಿಸಬೇಕು. ಸಾಲಬಾಧೆ ಅಥವಾ ಕೃಷಿ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡಬೇಕು. ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಿವಿಧ ಮಾಸಾಶನವನ್ನು ನೀಡಬೇಕು. ಸಕಾಲ ಯೋಜನೆಯಡಿ ಸ್ವೀಕರಿಸಿದ ಎಲ್ಲ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸಬೇಕು. ಈ ಮೂಲಕ ಸಾರ್ವಜನಿಕರಿಗೆ ಸಮರ್ಪಕವಾಗಿ ಸಕಾಲ ಯೋಜನೆಯ ಸೇವೆಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.