ಸಸ್ಯ ಸಂಕುಲ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯ ಎಸ್.ವಿ.ಎಂ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ  ಅಂತಾರಾಷ್ಟ್ರೀಯ ಪರಿಸರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ರೂಪ ದೇವರಾಜು, ಸುಬ್ರಹ್ಮಣ್ಯ, ರಶ್ಮಿತಾ, ವಿನೋದ್, ಶ್ರುತಿ, ಜಯವಾಣಿ, ನಿಶ್ಚಿತಾ, ರಂಜಿತಾ, ರಂಗನಾಥ್, ಮಮತಾ, ಕಾವ್ಯಾ, ನಾಗರತ್ನಾ, ಪ್ರೀತಿ, ಅನುಜಾ ಇದ್ದರು.
ಮದ್ದೂರು ತಾಲೂಕಿನ ಹೆಮ್ಮನಹಳ್ಳಿಯ ಎಸ್.ವಿ.ಎಂ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಅಂತಾರಾಷ್ಟ್ರೀಯ ಪರಿಸರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ರೂಪ ದೇವರಾಜು, ಸುಬ್ರಹ್ಮಣ್ಯ, ರಶ್ಮಿತಾ, ವಿನೋದ್, ಶ್ರುತಿ, ಜಯವಾಣಿ, ನಿಶ್ಚಿತಾ, ರಂಜಿತಾ, ರಂಗನಾಥ್, ಮಮತಾ, ಕಾವ್ಯಾ, ನಾಗರತ್ನಾ, ಪ್ರೀತಿ, ಅನುಜಾ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಎಸ್.ವಿ.ಎಂ ಇಂಟರ್ ನ್ಯಾಷನಲ್ ಸ್ಕೂಲ್ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಹೇಳಿಕೆ
  • ಪರಿಸರ ದಿನಾಚರಣೆ
ಮದ್ದೂರು: ಪರಿಸರ ಮಾಲಿನ್ಯ ತಡೆಗೆ ಜಾಗೃತಿ ಮೂಡಿಸುವುದು, ಪ್ರಕೃತಿಯನ್ನು ರಕ್ಷಿಸುವುದು ಮತ್ತು ಹಸಿರು ಭವಿಷ್ಯಕ್ಕಾಗಿ ಜನರನ್ನು ಪ್ರೇರೇಪಿಸುವ ಉದ್ದೇಶದಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತದೆ ಎಂದು ಎಸ್.ವಿ.ಎಂ ಇಂಟರ್ ನ್ಯಾಷನಲ್ ಸ್ಕೂಲ್ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ತಿಳಿಸಿದರು.
ತಾಲೂಕಿನ ಹೆಮ್ಮನಹಳ್ಳಿಯ ಎಸ್.ವಿ.ಎಂ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಾನವನ ಚಟುವಟಿಕೆಗಳಿಂದ ಭೂಮಿಯ ಮೇಲಾಗುತ್ತಿರುವ ವಾತಾವರಣದ ಬದಲಾವಣೆ ಮತ್ತು ಮಾಲಿನ್ಯದ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವುದು. ಸಸ್ಯ ಮತ್ತು ಪ್ರಾಣಿ ಸಂಕುಲದ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.
ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು, ಸಸಿಗಳನ್ನು ನೆಡುವುದು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಹಾನಿಕಾರಕ ಮಾಲಿನ್ಯವನ್ನು ತಡೆಗಟ್ಟಬೇಕು. ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಮತ್ತು ಉತ್ತಮ ಪರಿಸರವನ್ನು ಒದಗಿಸುವುದು ಪರಿಸರ ದಿನಾಚರಣೆ ಮುಖ್ಯ ಉದ್ದೇಶವಾಗಿದೆ ಎಂದರು.
ಪರಿಸರ ಸಂರಕ್ಷಣೆಯು ಕೇವಲ ಒಂದು ದಿನಕ್ಕೆ ಸೀಮಿತವಾಗಿರದೆ, ಪ್ರತಿಯೊಬ್ಬರ ನಿತ್ಯ ಜೀವನದ ಅಭ್ಯಾಸವಾಗಬೇಕು. ಮಕ್ಕಳಿಗೆ ಚಿಕ್ಕ ವಯಸ್ಸಿನಿಂದ ಪರಿಸರದ ಮಹತ್ವ ತಿಳಿಸಿಕೊಡಬೇಕು ಎಂದರು.
ಪರಿಸರ ನಾಶ ಮಾಡುತ್ತಿರುವುದರಿಂದ ಮನುಷ್ಯನ ಆರೋಗ್ಯ ಮೇಲೆ ಹಲವಾರು ರೀತಿಯ ದುಷ್ಪರಿಣಾಮ ಬೀರುತ್ತದೆ. ಇದನ್ನರಿತು ಪ್ರತಿಯೊಬ್ಬರು ಸಸಿಗಳನ್ನು ನೆಡುವ ಮೂಲಕ ಮುಂದಿನ ತಲೆ ಮಾರಿಗೆ ಉತ್ತಮ ಪರಿಸರ ನಿರ್ಮಾಣವಾಗುವಂತೆ ನೋಡಿಕೊಳ್ಳಬೇಕು ಎಂದರು.
ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಜತೆಗೆ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಸಿಗಳನ್ನು ವಿತರಣೆ ಮಾಡಿ ನೆಡುವಂತೆ ತಿಳಿಸಲಾಯಿತು.
ಸಂಸ್ಥೆಯ ಅಧ್ಯಕ್ಷೆ ರೂಪಾ ದೇವರಾಜು, ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ, ಸಹ ಶಿಕ್ಷಕ ರಶ್ಮಿತಾ, ವಿನೋದ್, ಶ್ರುತಿ, ಜಯವಾಣಿ, ನಿಶ್ಚಿತಾ, ರಂಜಿತಾ, ರಂಗನಾಥ್, ಮಮತಾ, ಕಾವ್ಯಾ, ನಾಗರತ್ನ, ಪ್ರೀತಿ, ಅನುಜಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net