ಇತ್ತಿಚೆಗೆ ಸಂಸತ್‌ನಲ್ಲಿ ಮಂಡನೆಯಾದ ಮಹಿಳಾ ಮೀಸಲು ಮಸೂದೆಗೆ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ವಿರೋಧ ವ್ಯಕ್ತಪಡಿಸಿರುವುದನ್ನು ಖಂಡಿಸಿ ಮದ್ದೂರು ತಾಲೂಕು ಜೆಡಿಎಸ್ ಮಹಿಳಾ ಘಟಕದ ವತಿಯಿಂದ ಮೈಸೂರು-ಬೆಂಗಳೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು. ದಿವ್ಯಾ ರಾಮಚಂದ್ರ ಶೆಟ್ಟಿ, ಶ್ವೇತಾ, ಚೌಡಮ್ಮ, ಎಂ.ಐ.ಪ್ರವೀಣ್, ಸವಿತಾ, ನಂದಿನಿ, ಭಾರತಿ, ನಳಿನಿ ಇದ್ದರು.
ಮದ್ದೂರು: ಇತ್ತಿಚೆಗೆ ಸಂಸತ್‌ನಲ್ಲಿ ಮಂಡನೆಯಾದ ಮಹಿಳಾ ಮೀಸಲು ಮಸೂದೆಗೆ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ವಿರೋಧ ವ್ಯಕ್ತಪಡಿಸಿರುವುದನ್ನು ಖಂಡಿಸಿ ಮದ್ದೂರು ಜೆಡಿಎಸ್ ಮಹಿಳಾ ಘಟಕದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರವಾಸಿ ಮಂದಿರದ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳಸಂಚಾರ ತಡೆದು ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಜೆಡಿಎಸ್ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ದಿವ್ಯಾ ರಾಮಚಂದ್ರ ಶೆಟ್ಟಿ ಮಾತನಾಡಿ, 1996ರಲ್ಲಿ ಅಂದಿನ ಪ್ರಧಾನ ಮಂತ್ರಿಗಳಾಗಿದ್ದ ರಾಜ್ಯದ ಮಣ್ಣಿನ ಮಗ ಎಚ್.ಡಿ.ದೇವೇಗೌಡರ ನೇತೃತ್ವದ ಸರ್ಕಾರವು ಮಹಿಳೆಯರಿಗೆ ಶೇ.33 ಮೀಸಲಾತಿ ನೀಡಲು ಕ್ರಾಂತಿಕಾರಿ ಮಸೂದೆ ಮಂಡಿಸಿತ್ತು. ಆದರೆ, ಅಂದು ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಸಂಘಟಿತವಾಗಿ ಆ ಪ್ರಯತ್ನವನ್ನು ವಿಫಲಗೊಳಿಸಿದ್ದರು ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷೆ ಶ್ವೇತಾ, ತಾಪಂ ಮಾಜಿ ಅಧ್ಯಕ್ಷೆ ಚೌಡಮ್ಮ, ನಗರಸಭಾ ಮಾಜಿ ಸದಸ್ಯರಾದ ಎಂ.ಐ.ಪ್ರವೀಣ್, ಮುಖಂಡರಾದ ಸವಿತಾ, ನಂದಿನಿ, ಭಾರತಿ, ನಳಿನಿ, ಮಂಜುಳಾ, ಪ್ರೇಮಾ, ಪದ್ಮಾ, ಅನಿತಾ, ಮಹೇಶ್, ಕೆಂಗಲ್ ಗೌಡ, ಮಲ್ಲರಾಜು, ಕುಮಾರ್, ಜುನೈದ್, ಮಹೇಶ್ ಮತ್ತಿತರರು ಇದ್ದರು.