ಮದ್ದೂರಿನಲ್ಲಿ ವಿವಿಧ ಸಂಘಟನೆಗಳ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮದ್ದೂರು ನಗರದ ಕೊಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಪ್ರಭುಲಿಂಗು, ಕೀಳಘಟ್ಟ ನಂಜುಂಡಯ್ಯ, ವಿ.ಸಿ.ಉಮಾಶಂಕರ್, ಸೊ.ಶಿ.ಪ್ರಕಾಶ್, ಕೆ.ಜಿ.ಉಮೇಶ, ವೆಂಕಟೇಶ್ ಇದ್ದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ವತಿಯಿಂದ ಮದ್ದೂರು ನಗರದ ಕೊಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಪ್ರಭುಲಿಂಗು, ಕೀಳಘಟ್ಟ ನಂಜುಂಡಯ್ಯ, ವಿ.ಸಿ.ಉಮಾಶಂಕರ್, ಸೊ.ಶಿ.ಪ್ರಕಾಶ್, ಕೆ.ಜಿ.ಉಮೇಶ, ವೆಂಕಟೇಶ್ ಇದ್ದರು.
Published on
ಮದ್ದೂರು: ಕೆ.ಆರ್.ಎಸ್.ಜಲಾಶಯದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿರುವ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ನಗರದ ಕೊಪ್ಪ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಎಚ್.ಜಿ.ಪ್ರಭುಲಿಂಗು ಮಾತನಾಡಿ, ಮುಂಗಾರು ಮಳೆ ವಿಫಲವಾಗಿ ನಾಡಿನ ಎಲ್ಲ ಜಲಾಶಯಗಳು ಬರಿದಾಗಿವೆ. ಇಂತಹ ಸಂದರ್ಭದಲ್ಲಿ ನೀರು ಹರಿಸುವಂತೆ ಆದೇಶ ಮಾಡಿರುವುದು ರೈತರ ಪಾಲಿಗೆ ಮರಣ ಶಾಸನವಾಗಿದೆ ಎಂದು ದೂರಿದರು.
ಜಿಲ್ಲಾ ಪತ್ರಿಕಾ ಕಾರ್ಯದರ್ಶಿ ಸೊ.ಸಿ.ಪ್ರಕಾಶ್ ಮಾತನಾಡಿ, ಕಾವೇರಿ ನೀರು ನಿರ್ವಹಣಾ ಸಮಿತಿಗೆ ಕರ್ನಾಟಕ ಪ್ರತಿನಿಧಿಸುವ ವಕೀಲರು ಹಾಗೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಪ್ರಸ್ತುತ ವಸ್ತು ಸ್ಥಿತಿ ತಿಳಿಸಿಕೊಡಬೇಕಿತ್ತು. ಈ ವಿಷಯದಲ್ಲಿ ಸಂಪೂರ್ಣ ವಿಫಲರಾಗಿರುವ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ ಮಾತನಾಡಿ, 15 ದಿನಗಳ ಕಾಲ ಜಲಾಶಯದಿಂದ ನೀರು ಹರಿಸಿದರೆ ಒಟ್ಟಾರೆ 5 ಟಿಎಂಸಿ ನೀರು ಬೇಕಾಗುತ್ತದೆ. ಇದರಲ್ಲಿ ಮೈಸೂರು, ಮಂಡ್ಯ ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಸರಬರಾಜು ಹೇಗೆ ಸಾಧ್ಯ. ಸರ್ಕಾರ ಸಮತಿ ಆದೇಶವನ್ನು ಧಿಕ್ಕರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೇಷ್ಮೆ ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಗುಡಿದೊಡ್ಡಿ ಶಿವಲಿಂಗಯ್ಯ, ರೈತ ಮುಖಂಡರಾದ ಕೀಳಘಟ್ಟ ನಂಜುಂಡಯ್ಯ, ಕೆ.ಜಿ.ಉಮೇಶ್, ಪಣ್ಣೆದೊಡ್ಡಿ ವೆಂಕಟೇಶ್, ಅರಗಿನ ಮೆಳೆ ರಾಮಣ್ಣ, ಮರಿಲಿಂಗು, ರಾಮಣ,್ಣ ಪುಟ್ಟಸ್ವಾಮಿ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಲಿಂಗರಾಜು, ಪಟೇಲ ಹರೀಶ್, ವಿ.ಪಿ.ವರದರಾಜು, ಸಿದ್ದರಾಮ, ದಿನೇಶ್, ಶೇಖರಪ್ಪ, ವಿಶ್ವಾಸ್, ರಾಘವ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net