ಎತ್ತಿನಗಾಡಿ ಹಾಗೂ ಜಾನುವಾರುಗಳೊಂದಿಗೆ ಗ್ರಾಮಸ್ಥರು ಆಗಮಿಸಿ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಹೆದ್ದಾರಿಯಲ್ಲೇ ಕುಳಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕೂ ಮೊದಲು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ರಸ್ತೆ ಸಂಚಾರ ತಡೆಯನ್ನು ಕೈಬಿಡಲು ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರಯೋಜವಾಗಲಿಲ್ಲ. ನಂತರ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ರೈತ ಪರ ಹೋರಾಟಗಾರ್ತಿ ಸುನಂದಾ ಜಯರಾಮು, ಲಿಂಗಪ್ಪಾಜಿ, ಶಂಕರ್, ಜಿ.ಪಿ.ಯೋಗೇಶ್, ವೀರಪ್ಪ, ಚಂದ್ರಶೇಖರ, ಗೌರಮ್ಮ, ಜಯಮ್ಮ ಸೇರಿದಂತೆ ಸುಮಾರು 80 ಕ್ಕೂ ಹೆಚ್ಚು ಪ್ರತಿಟನಾಕಾರರನ್ನು ವಶಕ್ಕೆ ಪಡೆದು 3 ವಾಹನಗಳಲ್ಲಿ ಮಂಡ್ಯದ ಪೊಲೀಸ್ ಠಾಣೆಗೆ ಕರೆದೋಯ್ದು ಮಧ್ಯಾಹ್ನದ ನಂತರ ಬಿಡುಗಡೆ ಮಾಡಲಾಯಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.