ಗ್ರಾಮದಲ್ಲಿರುವ ಕೆರೆಯಿಂದ ಬೆಂಗಳೂರಿಗೆ ನೀರು ಸರಬರಾಜಾಗುವ ಪೈಪ್‌ಲೈನ್ ಬಳಿ ಪ್ರಾಣಿಯೊಂದನ್ನು ನುಂಗಿದ್ದ ಸ್ಥಿತಿಯಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಜಾನುವಾರುಗಳನ್ನು ಮೇಯಿಸಲು ತೆರಳಿದ್ದ ದನಗಾಹಿಗಳು ಹೆಬ್ಬಾವನ್ನು ಕಂಡು ಆತಂಕಗೊಂಡರು. ಕೂಡಲೇ ತಮ್ಮ ಮೊಬೈಲ್‌ಗಳಲ್ಲಿ ಚಿತ್ರೀಕರಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ.