ಮದ್ದೂರು ತಾಲೂಕಿನಲ್ಲಿ ರಂಜಾನ್ ಸಂಭ್ರಮ

ರಂಜಾನ್ ಹಿನ್ನೆಲೆಯಲ್ಲಿ ಮದ್ದೂರು ನಗರದ ಮಳವಳ್ಳಿ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.
ರಂಜಾನ್ ಹಿನ್ನೆಲೆಯಲ್ಲಿ ಮದ್ದೂರು ನಗರದ ಮಳವಳ್ಳಿ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರಮುಖ ಬೀದಿಗಳಲ್ಲಿ ಮರೆವಣಿಗೆ
ಮದ್ದೂರು: ನಗರದ ಸೇರಿದಂತೆ ತಾಲೂಕಿನಾದ್ಯಂತ ಮುಸ್ಲಿಮರು ಸಂಭ್ರಮ-ಸಡಗರದಿಂದ ಶನಿವಾರ ರಂಜಾನ್ ಹಬ್ಬ ಆಚರಣೆ ಮಾಡಿದರು.
ನಗರದ ಹೊಳೆಬೀದಿಯಲ್ಲಿರುವ ಮಸೀದಿಯಿಂದ ನೂರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ನಗರದ ಪ್ರಮುಖ ಬೀದಿಗಳಲ್ಲಿ ಮರೆವಣಿಗೆ ಮೂಲಕ ಮಳವಳ್ಳಿ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ಆಗಮಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವರು ಹೊಸ ವಸ್ತ್ರಗಳನ್ನು ತೊಟ್ಟು, ಒಬ್ಬರಿಗೊಬ್ಬರು ಶುಭಾಶಯ ವಿನಿಮಯ ಮಾಡಿಕೊಂಡಿದ್ದು ವಿಶೇಷವಾಗಿತ್ತು.
ಬೆಸಗರಹಳ್ಳಿ, ಕೆಸ್ತೂರು, ಕೊಪ್ಪ ಸೇರಿದಂತೆ ಹಲವು ಕಡೆಗಳಲ್ಲಿ ಸಡಗರ ಸಂಭ್ರಮದಿಂದ ಮುಸ್ಲಿಂ ಬಾಂಧವರು ರಂಜಾನ್ ಆಚರಣೆ ಮಾಡಿದ್ದು ಕಂಡು ಬಂತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net