ಜನರಿಗೆ ಸಕಾಲದಲ್ಲಿ ಪ್ರಮಾಣಪತ್ರ ಸಿಗಲಿ: ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ

ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಜನನ ಮತ್ತು ಮರಣ ನೋಂದಣಿ ಸಮನ್ವಯ ಸಭೆ ಆಯೋಜಿಸಲಾಗಿತ್ತು.
ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಜನನ ಮತ್ತು ಮರಣ ನೋಂದಣಿ ಸಮನ್ವಯ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ನೋಂದಣಿಯನ್ನು ನಿಗದಿತ 21 ದಿನಗಳ ಒಳಗೆ ಕಡ್ಡಾಯವಾಗಿ ಮಾಡಬೇಕು
  • ನಗರದಲ್ಲಿ ನೋಂದಣಿ ಸಮನ್ವಯ ಸಭೆ
ಮಂಡ್ಯ: ಬದುಕಿರುವ ಪ್ರತಿ ವ್ಯಕ್ತಿಗೆ ಜನನ ಪ್ರಮಾಣ ಪತ್ರ ಅಗತ್ಯವಾದ ದಾಖಲೆ. ಅದೇ ರೀತಿ ವ್ಯಕ್ತಿಯ ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತ ದಾಖಲೆಯಾಗಿದೆ. ಈ ಹಿನ್ನೆಲೆಯಲ್ಲಿ ಜನನ ಮತ್ತು ಮರಣ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು. ಆದ್ದರಿಂದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಜನನ ಮತ್ತು ಮರಣ ನೋಂದಣಿ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನನ ಮತ್ತು ಮರಣಕ್ಕೆ ಸಂಬಂಧಿಸಿದಂತೆ ನೋಂದಣಿಯನ್ನು ನಿಗದಿತ 21 ದಿನಗಳ ಒಳಗೆ ಕಡ್ಡಾಯವಾಗಿ ಮಾಡಬೇಕು. ವಿಳಂಬ ನೋಂದಣಿಯನ್ನು ತಡೆಯಲು ಮತ್ತು ಸಕಾಲದಲ್ಲಿ ಪ್ರಮಾಣ ಪತ್ರಗಳನ್ನು ನೀಡಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಜನನ ಮತ್ತು ಮರಣ ನೋಂದಣಿ ಕಾರ್ಯ ಜಿಲ್ಲೆಯ ಎಲ್ಲ ಗ್ರಾಮ ಲೆಕ್ಕಿಗರು, ವೈದ್ಯಾಧಿಕಾರಿಗಳು ಹಾಗೂ ಪೌರಾಯುಕ್ತರು ಸರಿಯಾಗಿ ನಿರ್ವಹಿಸಬೇಕು. ನೋಂದಣಿ ವೇಳೆ ಸೂಕ್ತ ಪರಿಶೀಲನೆ ಕೈಗೊಂಡು ಅದರ ವರದಿ ಸಲ್ಲಿಸಬೇಕು. ವಿಳಂಬ ನೋಂದಣಿ ಘಟನೆ ತಡೆಯಬೇಕು. ಯಾವುದೇ ದಾಖಲಾತಿ ಬಾಕಿ ಉಳಿಯದಂತೆ ಶೇ.100 ರಷ್ಟು ನೋಂದಣಿ ಮಾಡುವಂತೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಜನನ ಮತ್ತು ಮರಣ ನೋಂದಣಿ ದಾಖಲಾತಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗೆ ಅವಕಾಶವಿಲ್ಲ. ಸಮರ್ಪವಾಗಿ ಕಾರ್ಯನಿರ್ವಹಣೆ ಮಾಡಲು ಹಾಗೂ ನಿಗದಿಯ ಅವಧಿಯಲ್ಲಿ ನೊಂದಣಿ ಮಾಡಲು ಅಗತ್ಯ ಕ್ರಮ ವಹಿಸಬೇಕು. ಗ್ರಾಮ ಮಟ್ಟದಲ್ಲಿ ಜನನ ಮತ್ತು ಮರಣ ನೋಂದಣಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರುವ ಸಂಬಂಧಿತ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೇಶವಮೂರ್ತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net