ಈವರೆಗೂ ಭತ್ತ ಖರೀದಿಗಾಗಿ 182 ರೈತರು 5,953.00 ಕ್ವಿಂಟಾಲ್ ಪ್ರಮಾಣದಲ್ಲಿ ಭತ್ತಕ್ಕೆ ನೋಂದಾಯಿಸಿಕೊಂಡಿರುತ್ತಾರೆ. ರಾಗಿ ಖರೀದಿಗಾಗಿ 13,047 ರೈತರು 3,08,666 ಕ್ವಿಂಟಾಲ್ ಪ್ರಮಾಣದ ರಾಗಿಗೆ ನೋಂದಾಯಿಸಿಕೊಂಡಿರುತ್ತಾರೆ. ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಭತ್ತ ಮತ್ತು ರಾಗಿ ಖರೀದಿಸಲು ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ 2,369 ರೂ., ಗ್ರೇಡ್-ಎ ಭತ್ತಕ್ಕೆ 2,389 ರೂ. ಹಾಗೂ ರಾಗಿ ಪ್ರತಿ ಕ್ವಿಂಟಾಲ್‌ಗೆ 4,886 ರೂ. ನಿಗದಿಪಡಿಸಲಾಗಿದೆ. ಜಿಲ್ಲೆಯ ಎಲ್ಲ ರೈತರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.