ನಗರದ ಜಿಪಂ ಕಚೇರಿಯಲ್ಲಿ ಆಯೋಜಿಸಿದ್ದ ಬೌದ್ದಿಕ ವಿಶೇಷ ಚೇತನ ಮಕ್ಕಳ ವಸತಿ ಶಾಲೆಗಳ ಶಿಕ್ಷಕರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಗವಿಕಲರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಮೇಲ್ವಿಚಾರಣಾ ಸಭೆ ಆಯೋಜಿಸಿ ಶಾಲೆಗಳ ಕಾರ್ಯನಿರ್ವಹಣೆ, ಮಕ್ಕಳ ಶೈಕ್ಷಣಿಕ ಪ್ರಗತಿ, ಮೂಲಸೌಕರ್ಯ, ಸಿಬ್ಬಂದಿ ಲಭ್ಯತೆ, ಅನುದಾನದ ಬಳಕೆ ಹಾಗೂ ನಿಯಮಗಳ ಅನುಸರಣೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಕಂಡುಬರುವ ಲೋಪಗಳನ್ನು ತ್ವರಿತವಾಗಿ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.