ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಗುರುರಾಜಪ್ರಭು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಶಿಸ್ತು ಬದ್ದ ಕೆಲಸ ಹಾಗೂ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದಾಗಿ ಈ ಅಸಾಧಾರಣ ಸಾಧನೆ ಮಾಡಲು ಸಾಧ್ಯವಾಗಿದೆ. ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ರವಿಕಾಂತ್ ಲಂಬಾಣಿ ಮತ್ತು ತಂಡ ಪರೀಕ್ಷೆ ಆರಂಭದಿಂದ ಮುಕ್ತಾಯದವರೆಗೂ ಸತತ ಪರಿಶ್ರಮ, ತಾಳ್ಮೆ, ಜಾಣ್ಮೆ, ಅತ್ಯಂತ ಶಿಸ್ತಿನಿಂದ ಶ್ರಮಿಸಿದ ಫಲವಾಗಿ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಲು ಸಹಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಡಾ.ರವಿಕಾಂತ್ ಲಮಾಣಿ, ಮೌಲ್ಯಮಾಪನ ಸಂಯೋಜಕ ಎಂ.ಮಾದೇಗೌಡ, ಪರೀಕ್ಷಾ ಸಮಿತಿ ಸಂಚಾಲಕ ಡಾ.ವಿ.ಶಿವಕೀರ್ತಿ, ಸಹ ಸಂಚಾಲಕ ಡಾ.ಎಸ್.ಶಿವರಾಮು, ಪರೀಕ್ಷಾಂಗ ವಿಭಾಗದ ಸಿಬ್ಬಂದಿ ಸಾಗರ್, ನವ್ಯಶ್ರೀ, ಪವಿತ್ರಾ, ಸಿಂಧೂಶ್ರೀ ಅವರನ್ನು ಅಭಿನಂದಿಸುತ್ತೇನೆ. ಈ ರೀತಿಯ ಫಲಿತಾಂಶ ಪ್ರಕಟಣೆ ವಿದ್ಯಾರ್ಥಿಗಳು, ಕಾಲೇಜಿನ ಸರ್ವೋತೋಮುಖ ಅಭಿವೃದ್ಧಿಗೆ ಮುನ್ನುಡಿಯಾಗಲಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಕಾರ್ಯವನ್ನು ಯಶಸ್ವಿಯಾಗಿ ಮುಂದುವರಿಸುತ್ತೇವೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಸುಗಮ ಓದಿಗೆ ಈ ಫಲಿತಾಂಶ ಸಕಾರಾತ್ಮಕ ಪರಿಣಾಮ ಉಂಟು ಮಾಡುತ್ತದೆಂದು ಸಂತಸ ವ್ಯಕ್ತಪಡಿಸಿದ್ದಾರೆ.