ಪೌತಿ ಖಾತೆ ಆಂದೋಲನದಲ್ಲಿ ಫಸ್ಟ್: ಕಂದಾಯ ಇಲಾಖೆ ಅಧಿಕಾರಿಗಳಿಗೆ ಡಿಸಿ ಮೆಚ್ಚುಗೆ

ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆ ಕುಂದುಕೊರತೆ ಸಭೆ ಆಯೋಜಿಸಲಾಗಿತ್ತು.
ಮಂಡ್ಯದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆ ಕುಂದುಕೊರತೆ ಸಭೆ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ಪೌತಿ ಖಾತೆ ಆಂದೋಲನದಲ್ಲಿ ರಾಜ್ಯಕ್ಕೆ ಮಂಡ್ಯ ಫಸ್ಟ್
  • ಅಧಿಕಾರಿ ಮತ್ತು ನೌಕರರ ಸಾಧನೆಗೆ ಡಿಸಿ ಮೆಚ್ಚುಗೆ
  • ಕಾನೂನು ಬದ್ಧವಾಗಿ ಕೆಲಸ ನಿರ್ವಹಿಸಲು ಸೂಚನೆ
ಮಂಡ್ಯ: ಕಂದಾಯ ಇಲಾಖೆಯಲ್ಲಿನ ಇ-ಪೌತಿ ಖಾತಾ ಆಂದೋಲನದಲ್ಲಿ ಮಂಡ್ಯ ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಕರ್ತವ್ಯ ವೈಖರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಂದಾಯ ಇಲಾಖೆ ನೌಕರರ ಕುಂದುಕೊರತೆ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಲಾಖೆ ನೌಕರರು ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿರುವುದರಿಂದ ಪೌತಿ ಖಾತೆ ಆಂದೋಲನದಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ಇ ಪೌತಿ ಖಾತೆ, ಸಕಾಲ ಅರ್ಜಿ, ಬೆಳೆ ಸಮೀಕ್ಷೆ ಹಾಗೂ ಎಲ್ಲ ವಿಷಯಗಳಲ್ಲಿ ಗುರಿ ನಿಗದಿಪಡಿಸುತ್ತಿರುವುದು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತ್ವರಿತವಾಗಿ ಕೆಲಸ ಮಾಡಿಕೊಟ್ಟ ಹಾಗೇ ಆಗುತ್ತಿದೆ. ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಪೌತಿ ಖಾತೆ ಆಂದೋಲನದ ಕೆಲಸವನ್ನು ಕಾನೂನು ಬದ್ಧವಾಗಿ ಸರ್ಕಾರ ನಿಗದಿಪಡಿಸಿರುವ ನಿಯಮಗಳ ಅನುಸಾರ ಮಾಡುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಕಂದಾಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇರ ನೇಮಕಾತಿ ಸರ್ಕಾರದ ಮಟ್ಟದಲ್ಲಿ ಇದೆ. ಸರ್ಕಾರಕ್ಕೆ ಈ ಸಂಬಂಧ ಪ್ರಸ್ತಾವನೆ ಕಳುಹಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಸರ್ಕಾರದಿಂದ ಆಗುತ್ತದೆ. ಕಂದಾಯ ಇಲಾಖೆಯ ನೌಕರರಿಗೆ ಕಾಲಮಿತಿ ವೇತನ ಬಡ್ತಿ ಪ್ರಕ್ರಿಯೆ, ಪ್ರೊಬೇಷನರಿ ಘೋಷಣೆ ವಿಳಂಬ ಆಗದಂತೆ ತುರ್ತಾಗಿ ಮಾಡಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ನೌಕರರಿಗೆ ಸಾಂದರ್ಭಿಕ ರಜೆ ಮಂಜೂರು ಮಾಡಬೇಕು. ವೇತನ ಪಾವತಿ ಪ್ರತಿ ತಿಂಗಳು ತಡ ಆಗದಂತೆ ಮಾಡಲು ಬಟವಾಡೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಕಂದಾಯ ಇಲಾಖೆಯಲ್ಲಿ ನೌಕರರ ಮೇಲೆ ಇಲಾಖಾ ವಿಚಾರಣೆ ಬಾಕಿ ಇದು,್ದ ನಿಗದಿತ ಅವಧಿಯೊಳಗೆ ತುರ್ತಾಗಿ ವಿಚಾರಣೆಯನ್ನು ಪೂರ್ಣಗೊಳಿಸಬೇಕು. ಗ್ರಾಮ ಸಹಾಯಕರು ಸೇವಾ ಅವಧಿಯಲ್ಲಿ ಮೃತಪಟ್ಟಲ್ಲಿ ಅವರ ಕುಟುಂಬಸ್ಧರಿಗೆ ಅನುಕಂಪದ ನೇಮಕಾತಿಯನ್ನು ವಿಳಂಬ ಆಗದಂತೆ ಅವರ ಕುಟುಂಬಕ್ಕೆ ಅನುಕೂಲವಾಗುವಂತೆ ತುರ್ತಾಗಿ ನೇಮಕಾತಿ ಮಾಡಿಕೊಳ್ಳುವಂತೆ ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ಸಾರ್ವಜನಿಕರ ಕೆಲಸವನ್ನು ಮಾಡಲು ಅಧಿಕಾರಿಗಳು ವಿಳಂಬ ಆಗದಂತೆ ತುರ್ತಾಗಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ನಿಗದಿತ ಅವಧಿಯೊಳಗೆ ಸಾರ್ವಜನಿಕರ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್, ಜಿಲ್ಲಾ ಕಂದಾಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ತಮ್ಮಣ್ಣಗೌಡ, ಜಿಲ್ಲಾ ಗ್ರಾಮಾಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net