ಕಂಟೇನರ್-ಬೈಕ್ ನಡುವೆ ಡಿಕ್ಕಿಯಾಗಿ ಸವಾರ ಸಾವು

 ಅಪಘಾತ
ಅಪಘಾತ
Published on

ಮಳವಳ್ಳಿ: ತಾಲೂಕಿನ ಚೋಳನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಬೈಕ್ ಹಾಗೂ ಕಂಟೇನರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ತಾಲೂಕಿನ ಕೂನನಪುರ ಗ್ರಾಮದ ಟಿ.ನಾಗರಾಜು (55) ಮೃತರು. ಕಾರ್ಯ ನಿಮಿತ್ತ ತಮ್ಮ ಬೈಕ್‌ನಲ್ಲಿ ಮಳವಳ್ಳಿಯಿಂದ ಹಾಡ್ಲಿ ವೃತ್ತದ ಕಡೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಂಟೇನರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದಿಂದ ಕೆಳಗೆ ಬಿದ್ದ ಬೈಕ್ ಸವಾರ ನಾಗರಾಜು ಅವರ ತಲೆಯ ಮೇಲೆ ಲಾರಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶಿಲನೆ ನಡೆಸಿ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಸ್ಥಳಾಂತರಿಸಿದ್ದು, ಮಂಗಳವಾರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಒಪ್ಪಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net