2 ಕೋಟಿ ವೆಚ್ಚದಲ್ಲಿ ರಸ್ತೆ, ಸೇತುವೆ ನಿರ್ಮಾಣ

ತಾಲೂಕಿನ ಮಾಚಹಳ್ಳಿ ಬಳಿ 2 ಕೋಟಿ ರೂ. ವೆಚ್ಚದಲ್ಲಿ ನೂತನ ರಸ್ತೆ, ಸೇತುವೆ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ
ತಾಲೂಕಿನ ಮಾಚಹಳ್ಳಿ ಬಳಿ 2 ಕೋಟಿ ರೂ. ವೆಚ್ಚದಲ್ಲಿ ನೂತನ ರಸ್ತೆ, ಸೇತುವೆ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ
Published on
ಮದ್ದೂರು: ಈ ಹಿಂದೆ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಸರಿಯಾಗಿ ನಡೆಯದಿದ್ದ ಕಾರಣ ಅವುಗಳನ್ನು ಸರಿಪಡಿಸಲು ಕ್ರಮವಹಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಮಾಚಹಳ್ಳಿ ಬಳಿ 2 ಕೋಟಿ ರೂ. ವೆಚ್ಚದಲ್ಲಿ ನೂತನ ರಸ್ತೆ, ಸೇತುವೆ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಶಿಂಷಾ ನದಿಯಿಂದ ಆತಗೂರು ಹೋಬಳಿ ವ್ಯಾಪ್ತಿಯ ಹತ್ತಾರು ಹಳ್ಳಿಗಳ ಕೆರೆಗಳಿಗೆ ನೀರು ತುಂಬಿಸಲು ಸಣ್ಣ ಪೈಪುಗಳನ್ನು ಹಾಕಲಾಗಿದೆ. ಅಲ್ಲದೆ ಯಾವುದೇ ಮುತುವರ್ಜಿ ವಹಿಸದಿರುವುದರಿಂದ ಇಷ್ಟೊಂದು ಅದ್ವಾನಗೊಂಡಿದೆ. ಈ ಬಗ್ಗೆ ಗ್ರಾಮಸ್ಥರು ಅಳ್ಝ್ಠ ತೋಡಿಕೊಳ್ಳುತ್ತಾರೆ. ಈ ಹಿಂದೆ ನಡೆದಿದ್ದ ಅದ್ವಾನಗಳನ್ನೆಲ್ಲ ಸರಿಪಡಿಸಿ ರೈತರಿಗೆ ಅನುಕೂಲವಾಗಲೆಂಬ ದೃಷ್ಟಿಯಿಂದ ಸರಿಪಡಿಸಲಾಗುತ್ತಿದೆ ಎಂದರು.
ಮನ್‌ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಬ್ಲ್ಯಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೊರೆಶೆಟ್ಟಿಹಳ್ಳಿ ನಾಗೇಗೌಡ, ಮುಖಂಡರಾದ ಕೆಸ್ತೂರು ದಾಸೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net