ಸರ್ಕಾರಿ ಶಾಲೆ ಉಳಿವು ಅಗತ್ಯ: ಮನ್‌ಮುಲ್ ನಿರ್ದೇಶಕ ಬಿ.ಆರ್.ರಾಮಚಂದ್ರು ಹೇಳಿಕೆ

ಮಂಡ್ಯ ನಗರದ ಹಾಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.
ಮಂಡ್ಯ ನಗರದ ಹಾಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಸಿಎಸ್‌ಆರ್ ಅನುದಾನದಲ್ಲಿ ಎರಡು ಕೊಠಡಿ ನಿರ್ಮಾಣ
  • ಅಂದಾಜು 32.5 ಲಕ್ಷ ರೂ ವೆಚ್ಚದಲ್ಲಿ ಕಾಮಗಾರಿ
ಮಂಡ್ಯ: ಪ್ರಸ್ತುತ ದಿನದಲ್ಲಿ ಸರ್ಕಾರಿ ಶಾಲೆ ಉಳಿವು ಅಗತ್ಯವಾಗಿದೆ ಎಂದು ಮನ್‌ಮುಲ್ ನಿರ್ದೇಶಕ ಬಿ.ಆರ್.ರಾಮಚಂದ್ರು ಹೇಳಿದರು.
ನಗರದ ಹಾಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ(ದಕ್ಷಿಣ ವಲಯ)ಯಲ್ಲಿ ಸಿಎಸ್‌ಆರ್ ಅನುದಾನದಲ್ಲಿ ಎರಡು ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರ ಅವರು, ಸರ್ಕಾರಿ ಶಾಲೆಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸಂಸದರೂ ಆದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಹಕರಿಸಲಿದ್ದಾರೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅದರಂತೆ ಶಾಲಾಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಮಾತನಾಡಿ, ಸಂಸದ ಎಚ್.ಡಿ.ಕುಮಾರಸ್ವಾಮಿ ಅವರು ಅರ್ಸೆಲರ್ ಮಿತ್ತಲ್ ಪ್ರೈವೇಟ್ ಲಿಮಿಟೆಡ್ ಹಾಗೂ ಸಿಎಸ್‌ಆರ್ ಅನುದಾನದ ಅಂದಾಜು 32.5 ಲಕ್ಷ ರೂ ವೆಚ್ಚದಲ್ಲಿ ಎರಡು ಶಾಲಾ ಕೊಠಡಿಗಳ ನಿರ್ಮಾಣ ಮಾಡಿಸುತ್ತಿದ್ದಾರೆ. ಈ ಶಾಲೆಯಲ್ಲಿ ಕೊಠಡಿಗಳ ಅವಶ್ಯಕತೆ ಬಗ್ಗೆ ಸಂಸದರಿಗೆ ಮನವಿ ನೀಡಲಾಗಿತ್ತು. ಅದರಂತೆ ಅವರ ಕಾಳಜಿಯಿಂದ ನಿರ್ಮಾಣವಾಗುತ್ತಿದೆ ಎಂದು ತಿಳಿಸಿದರು.
ಮುಖಂಡರಾದ ಎಚ್.ಆರ್.ಅಶೋಕ್‌ಕುಮಾರ್, ಹಾಲಹಳ್ಳಿ ಮಹೇಶ್, ಅರವಿಂದ್, ಸಾತನೂರು ಜಯರಾಂ, ಶಂಕರ್, ಬೋರೇಗೌಡ, ಬೇಲೂರು ಶಶಿಧರ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net