ಸಾವಯವ ಕೃಷಿಯಿಂದ ರೈತರಿಗೆ ಆದಾಯ: ಮಣ್ಣು ವಿಜ್ಞಾನ ವಿಭಾಗದ ವಿಜ್ಞಾನಿ ಡಾ.ಯೋಗೇಶ್ ಹೇಳಿಕೆ

  ಮೇಲುಕೋಟೆ ಸಮೀಪದ ತಾಳೆಕೆರೆ ಗ್ರಾಮದಲ್ಲಿ ಅಂತಿಮ ವರ್ಷದ ಬಿಎಸ್ಸಿ(ಆನರ್ಸ್) ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ ಆಯೋಜಿಸಲಾಗಿತ್ತು.
ಮೇಲುಕೋಟೆ ಸಮೀಪದ ತಾಳೆಕೆರೆ ಗ್ರಾಮದಲ್ಲಿ ಅಂತಿಮ ವರ್ಷದ ಬಿಎಸ್ಸಿ(ಆನರ್ಸ್) ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ ಆಯೋಜಿಸಲಾಗಿತ್ತು.
Published on

ಪ್ರಮುಖ ಮುಖ್ಯಾಂಶಗಳು

  • ತಾಳೆಕೆರೆ ಗ್ರಾಮದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ
  • ಗುಣಮಟ್ಟದ ಕಾಂಪೋಸ್ಟ್ ಗೊಬ್ಬರ ತಯಾರಿಸುವ ವಿಧಾನದ ಪ್ರಾತ್ಯಕ್ಷಿಕೆ

ಮೇಲುಕೋಟೆ: ಸಾವಯವ ಕೃಷಿಯಿಂದ ರೈತನ ಆದಾಯ ಹೆಚ್ಚಿಸುವ ಜತೆಗೆ ಉತ್ತಮ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ವಿಭಾಗದ ವಿಜ್ಞಾನಿ ಡಾ.ಯೋಗೇಶ್ ಹೇಳಿದರು.

ಸಮೀಪದ ತಾಳೆಕೆರೆ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾಲಯದ ಹಾಗೂ ಕೃಷಿ ಮಹಾವಿದ್ಯಾಲಯ ಮಂಡ್ಯ ಸಹಯೋಗದಲ್ಲಿ ಅಂತಿಮ ವರ್ಷದ ಬಿಎಸ್ಸಿ(ಆನರ್ಸ್) ಕೃಷಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಮಾತನಾಡಿದ ಅವರು, ಮನೆ ಮತ್ತು ಜಮೀನಿನಿಂದ ದೊರೆಯುವ ಸಾವಯವ ತ್ಯಾಜ್ಯವನ್ನು ಸಂಪನ್ಮೂಲವಾಗಿ ಪರಿವರ್ತಿಸಿ ಗುಣಮಟ್ಟದ ಕಾಂಪೋಸ್ಟ್ ಗೊಬ್ಬರ ತಯಾರಿಸಬಹುದು ಎಂದರು.
ಬೀಜ ತಂತ್ರಜ್ಞಾನ ವಿಭಾಗದ ವಿಜ್ಞಾನಿ ಡಾ.ಮಲ್ಲಿಕಾರ್ಜುನ ಶೇರಖಾನೆ ಮಾರ್ಗದರ್ಶನದಲ್ಲಿ ಸಾವಯವ ತ್ಯಾಜ್ಯ ಮರುಬಳಕೆ ಬಗ್ಗೆ ವಿದ್ಯಾರ್ಥಿಗಳು ಪ್ರಾತ್ಯಕ್ಷಿತೆ ನಡೆಸಿಕೊಟ್ಟರು. ಮೂವತ್ತಕ್ಕೂ ಹೆಚ್ಚು ರೈತರು ಭಾಗವಹಿಸಿದರು. ಕಾಂಪೋಸ್ಟ್ ಗುಂಡಿ ತಯಾರಿಕೆಯಲ್ಲಿ ಅಳವಡಿಸುವ ವಿವಿಧ ಪದರಗಳ ವಿಧಾನ, ಸಾವಯವ ತ್ಯಾಜ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಕ್ರಮ ಹಾಗೂ ತ್ಯಾಜ್ಯ ವಿಘಟಕ (ವೇಸ್ಟ್ ಡಿಕಂಪೋಸರ್) ದ್ರಾವಣದ ಬಳಕೆ ಕುರಿತು ರೈತರಿಗೆ ಪ್ರಾಯೋಗಿಕವಾಗಿ ವಿವರಿಸಿದರು. ಮನೆ ಮತ್ತು ಜಮೀನಿನಿಂದ ದೊರೆಯುವ ಸಾವಯವ ತ್ಯಾಜ್ಯವನ್ನು ಸಂಪನ್ಮೂಲವಾಗಿ ಪರಿವರ್ತಿಸಿ ಗುಣಮಟ್ಟದ ಕಾಂಪೋಸ್ಟ್ ಗೊಬ್ಬರ ತಯಾರಿಸುವ ವಿಧಾನವನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಲಾಯಿತು.
ಸಾವಯವ ಗೊಬ್ಬರ ತಯಾರಿಕೆ ಹಾಗೂ ಬಳಕೆಗೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದುಕೊಂಡರು. ಸಾವಯವ ತ್ಯಾಜ್ಯದ ಸಮರ್ಪಕ ಮರುಬಳಕೆಯ ಮೂಲಕ ಮಣ್ಣಿನ ಫಲವತ್ತತೆಯನ್ನು ಕಾಪಾಡುವುದರ ಜತೆಗೆ ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬಹುದು ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ನೀಡಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net