ಪ್ರತಿಭೆ ಹೊರತರಲು ಶಾಲಾ ವಾರ್ಷಿಕೋತ್ಸವ ಸೂಕ್ತ ವೇದಿಕೆ

ಕೆ.ಆರ್.ಪೇಟೆ ತಾಲೂಕಿನ ಬಲ್ಲೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಬೂಕನಕೆರೆ ಹೋಬಳಿ ಮಟ್ಟದ ಪ್ರೌಢಶಾಲಾ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶಿಕ್ಷಣ ಸಂಯೋಜಕ ಎಂ.ಎಸ್.ಸುರೇಶ್ ಉದ್ಘಾಟಿಸಿದರು. ಶಿವಣ್ಣ, ಮನು, ಆರ್.ಪಿ.ನಂದೀಶ್, ನಾಗೇಂದ್ರ, ಮಹೇಶ್‌ಕುಮಾರ್ ಇತರರಿದ್ದರು.
ಕೆ.ಆರ್.ಪೇಟೆ ತಾಲೂಕಿನ ಬಲ್ಲೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಬೂಕನಕೆರೆ ಹೋಬಳಿ ಮಟ್ಟದ ಪ್ರೌಢಶಾಲಾ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶಿಕ್ಷಣ ಸಂಯೋಜಕ ಎಂ.ಎಸ್.ಸುರೇಶ್ ಉದ್ಘಾಟಿಸಿದರು. ಶಿವಣ್ಣ, ಮನು, ಆರ್.ಪಿ.ನಂದೀಶ್, ನಾಗೇಂದ್ರ, ಮಹೇಶ್‌ಕುಮಾರ್ ಇತರರಿದ್ದರು.
Published on
ಕೆ.ಆರ್.ಪೇಟೆ: ತಾಲೂಕಿನ ಬೂಕನಕೆರೆ ಹೋಬಳಿ ಮಟ್ಟದ ಪ್ರೌಢಶಾಲಾ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಬಲ್ಲೇನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ತಾಲೂಕು ಶಿಕ್ಷಣ ಸಂಯೋಜಕ ಎಂ.ಎಸ್.ಸುರೇಶ್ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ವೇದಿಕೆ ಸಹಕಾರಿಯಾಗಿದೆ. ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಗುರುತಿಸಿ ಹೊರತರಲು ಪ್ರತಿಭಾ ಕಾರಂಜಿ, ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳು ಸೂಕ್ತ ವೇದಿಕೆಗಳಾಗಿವೆ. ಸಾರ್ವಜನಿಕವಾಗಿ ಮಾತನಾಡುವುದು ಸುಲಭ. ಅದೇ ವೇದಿಕೆಯ ಮೇಲೆ ನಿಂತು ಮಾತನಾಡುವುದು ಪ್ರತಿಭೆ ಎಂದರು.
ಸ್ಪರ್ಧೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವುದರಿಂದ ಧೈರ್ಯ ಮತ್ತು ಆತ್ಮವಿಶ್ವಾಸ ಬೆಳೆಯುತ್ತದೆ. ಕಲೆ, ಸಂಸ್ಕೃತಿಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ನಡುವೆ ಆರೋಗ್ಯಕರ ಸ್ಪರ್ಧೆಯನ್ನು ಪ್ರೋತ್ಸಾಹಿಸುವ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸುವುದಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮುಖ್ಯ ವೇದಿಕೆಯಾಗಿದೆ ಎಂದರು.
ಕಲೆ, ಸಾಹಿತ್ಯ, ಸಂಗೀತ, ನೃತ್ಯ, ಗಾಯನ ಇವು ಕಲಾ ಪ್ರಕಾರಗಳಾಗಿದ್ದು, ಪ್ರತಿಯೊಬ್ಬರನ್ನೂ ಆಕರ್ಷಿಸುತ್ತವೆ. ಆದರೆ ಕೆಲವರಲ್ಲಿ ಈ ಮಾತ್ರ ಕಲಾ ಪ್ರತಿಭೆ ಮೈಗೂಡಿರುತ್ತದೆ. ಶಾಲಾ ಶಿಕ್ಷಣ ಇಲಾಖೆಯು ಮಕ್ಕಳಲ್ಲಿ ಅಡಗಿರುವ ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜಾರಿಗೆ ತಂದಿರುವುದು ಉತ್ತಮ ಕಾರ್ಯಕ್ರಮವಾಗಿದೆ ಎಂದು ಶಿಕ್ಷಣ ಸಂಯೋಜಕ ಎಂ.ಎಸ್.ಸುರೇಶ್ ಹೇಳಿದರು.
ಬಲ್ಲೇನಹಳ್ಳಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಶಿವಣ್ಣ, ಎಸ್‌ಡಿಎಂಸಿ ಅಧ್ಯಕ್ಷ ಮನು, ಆರ್.ಪಿ.ನಂದೀಶ್, ನಾಗೇಂದ್ರ, ಮಹೇಶ್‌ಕುಮಾರ್ ಹಾಗೂ ಶಿಕ್ಷಕರು, ಪಾಲಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳು ಪ್ರದರ್ಶನ ಮಾಡಿದ ಪ್ರತಿಭಾ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸೆಳೆದವು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net