ಕಾಳೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂಭವನ್ನು ಗ್ರಾಮದ ಬೀದಿಗಳಲ್ಲಿ ಎತ್ತಿನಗಾಡಿ ಮೆರವಣಿಗೆ ಗಮನ ಸೆಳೆಯಿತು. ಜಯರಾಂ, ಮಂಜೇಗೌಡ, ಚಂದ್ರು, ಜಗಣ್ಣ, ಪೂಜಾರಪ್ಪ, ಪುಟ್ಟರಾಜು, ರಾಧಾ ಇದ್ದರು.
ಕಿಕ್ಕೇರಿ: ಹೋಬಳಿಯಾದ್ಯಂತ ಸರ್ಕಾರಿ ಶಾಲಾ ಕಾಲೇಜುಗಳು ಸಂಭ್ರಮ ಸಡಗರದಿಂದ ಸೋಮವಾರ ಆರಂಭಿಸಲಾಯಿತು.
ಶಾಲಾ ಪರಿಸರವನ್ನು ಬಾಳೆಕಂದು, ತಳಿರು ತೋರಣ, ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಕಾಳೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮಸ್ಥರು ಶಾಲೆ ಆರಂಭಕ್ಕೆ ಸಾಥ್ ನೀಡಿದರು. ಖಾಸಗಿ ಶಾಲೆಗೆ ಸೇರಿಸಿದ್ದ ಬಹುತೇಕ ಮಕ್ಕಳನ್ನು ಗ್ರಾಮದ ಸರ್ಕಾರಿ ಶಾಲೆಗೆ ಸೇರ್ಪಡೆ ಮಾಡಿದರು. ಪಾರಿವಾಳವನ್ನು ಹಾರಿ ಬಿಡುವ ಮೂಲಕ ಶಾಲೆ ಬಾಗಿಲು ತೆರಯಲಾಯಿತು. ಬ್ಯಾಂಡ್‌ಸೆಟ್, ಎತ್ತಿನಗಾಡಿ ಮೆರವಣಿಗೆ ಮಾಡಲಾಯಿತು. ಸರ್ಕಾರಿ ಶಾಲೆ ಉಳಿಸಿ, ನಿಮ್ಮೂರು ಶಾಲೆ ಎಂಬ ಘೋಷವಾಕ್ಯ ಮೊಳಗಿತು. ಮಕ್ಕಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ತರಗತಿಗಳಿಗೆ ಶಿಕ್ಷಕರು ಮಕ್ಕಳನ್ನು ಸ್ವಾಗತಿಸಿದರು. ಕಿಕ್ಕೇರಿ ಕೆಪಿಎಸ್ ಶಾಲೆಯಲ್ಲಿ ಮಕ್ಕಳಿಗೆ ಸಿಹಿ ಹಂಚಿ ಮಕ್ಕಳನ್ನು ಸ್ವಾಗತಿಸಿದರು.
ಅಲೆಮಾರಿ ಸಮುದಾಯದ ಮಕ್ಕಳು ಹೆಚ್ಚಿರುವ ಕೃಷ್ಣಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಪುಷ್ಪಾರ್ಚನೆ ಮಾಡಿ ಸಿಹಿ ವಿತರಿಸಿ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು.