ನಾಳೆ ವಿಚಾರಗೋಷ್ಠಿ, ಕಾರ್ಯಾಗಾರ

ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ಆಯೋಜನೆ ಸಂಬಂಧ ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಎಸ್‌ಸಿ ಎಸ್‌ಟಿ ಜಾಗೃತಿ ಸಮಿತಿ ಸದಸ್ಯ ಚಿದಂಬರ ಮೂರ್ತಿ ಮಾತನಾಡಿದರು. ರಘು, ಸಿದ್ದರಾಜು, ರಾಜೇಂದ್ರ, ಮಹದೇವಯ್ಯ, ಶಿವಲಿಂಗಯ್ಯ, ಭಾನುಪ್ರಕಾಶ್, ಸಿದ್ದರಾಮು, ಕುಮಾರ್, ಶರತ್ ಇದ್ದರು.
ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ಆಯೋಜನೆ ಸಂಬಂಧ ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಎಸ್‌ಸಿ ಎಸ್‌ಟಿ ಜಾಗೃತಿ ಸಮಿತಿ ಸದಸ್ಯ ಚಿದಂಬರ ಮೂರ್ತಿ ಮಾತನಾಡಿದರು. ರಘು, ಸಿದ್ದರಾಜು, ರಾಜೇಂದ್ರ, ಮಹದೇವಯ್ಯ, ಶಿವಲಿಂಗಯ್ಯ, ಭಾನುಪ್ರಕಾಶ್, ಸಿದ್ದರಾಮು, ಕುಮಾರ್, ಶರತ್ ಇದ್ದರು.
Published on
ಮದ್ದೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಕಾಯ್ದೆ ಅನ್ವಯ ವಿಚಾರಗೋಷ್ಠಿ ಮತ್ತು ಕಾರ್ಯಾಗಾರವನ್ನು ಫೆ. 23ರಂದು ಬೆಳಗ್ಗೆ 10.30ಕ್ಕೆ ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಸಿ, ಎಸ್‌ಟಿ ಜಾಗೃತಿ ಸಮಿತಿ ಸದಸ್ಯ ಚಿದಂಬರ ಮೂರ್ತಿ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ತಾಲೂಕು ಕಾನೂನು ಸೇವಾ ಪ್ರಾಧಿಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು.
ಕಾರ್ಯಾಗಾರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿ ಇರುವರು. ಸಚಿವ ಎನ್.ಚಲುವರಾಯಸ್ವಾಮಿ ವಿಚಾರಗೋಷ್ಠಿ ಉದ್ಘಾಟಿಸುವರು, ಶಾಸಕ ಕೆ.ಎಂ.ಉದಯ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್‌ಗೂಳಿಗೌಡ, ವಿವೇಕಾನಂದ ಭಾಗವಹಿಸಲಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿ ರಾಜ್ಯ ಸಂಚಾಲಕಿ ಪಿ.ಯಶೋದಾ ವಿಚಾರ ಮಂಡನೆ ಮಾಡಲಿದ್ದಾರೆಂದು ತಿಳಿಸಿದರು.
ತಾಲೂಕು ಮಟ್ಟದ ಜಾಗೃತಿ ಸಮಿತಿ ಸದಸ್ಯರು, ಸಂಘ, ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ತಾಲೂಕು ಮಟ್ಟದ ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸಭೆಯಲ್ಲಿ ಜಾಗೃತಿ ಸಮಿತಿ ಸದಸ್ಯ ರಘು, ಕೆಡಿಪಿ ಸದಸ್ಯ ಸಿದ್ದರಾಜು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷ ರಾಜೇಂದ್ರ, ಎಸ್‌ಸಿ, ಎಸ್‌ಟಿ ವಿಭಾಗದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹದೇವಯ್ಯ, ಶಿವಲಿಂಗಯ್ಯ, ಮುಖಂಡರಾದ ಭಾನುಪ್ರಕಾಶ್, ಸಿದ್ದರಾಮು, ಕುಮಾರ್, ಶರತ್ ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net