ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಸಲ್ಲ

ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಆರ್.ಮಹೇಶ್ ಮಾತನಾಡಿದರು. ಕೆ.ಎನ್.ಪ್ರಕಾಶ್, ಗಂಗರಾಜು, ಕೆ.ಎಸ್.ಮೋಹನ್ ಕುಮಾರ್, ಎಸ್.ಎನ್. ಮಧು ಇದ್ದರು.
ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಆರ್.ಮಹೇಶ್ ಮಾತನಾಡಿದರು. ಕೆ.ಎನ್.ಪ್ರಕಾಶ್, ಗಂಗರಾಜು, ಕೆ.ಎಸ್.ಮೋಹನ್ ಕುಮಾರ್, ಎಸ್.ಎನ್. ಮಧು ಇದ್ದರು.
Published on

ಪಾಂಡವಪುರ:

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಳ್ಳ ಸಾಗಣೆ, ಕೆಲಸಕ್ಕೆ ದೂಡುವುದು ಕಂಡುಬಂದರೆ ತಕ್ಷಣ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಜೆಎಂಎಫ್‌ಸಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಹೇಶ್ ಹೇಳಿದರು.

ತಾಲೂಕಿನ ಅರಳಕುಪ್ಪೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಇತ್ತೀಚೆಗೆ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಅರಳಕುಪ್ಪೆ ಸರ್ಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಮಾನವ ಕಳ್ಳ ಸಾಗಣೆ ತಡೆ ದಿನ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳನ್ನು ಅಕ್ರಮವಾಗಿ ಸಾಗಿಸುವ ಕೃತ್ಯ ಅಪರಾಧ. ಇಂತಹ ಕೃತ್ಯ ಕಂಡುಬಂದಾಗ ಅದು ನನಗೆ ಸಂಬಂಧಪಟ್ಟಿದ್ದಲ್ಲ, ನನಗೇಕೆ ಬೇಕು ಎಂದು ಸುಮ್ಮನೆ ಇರಬಾರದು. ಮಕ್ಕಳ ಕಳ್ಳ ಸಾಗಣೆ ಒಂದು ನಿರ್ದಿಷ್ಟ ಮಾಹಿತಿ ತಿಳಿದಾಗ ತಕ್ಷಣ ಪೊಲೀಸರಿಗೆ ತಿಳಿಸಿ ಮಕ್ಕಳನ್ನು ರಕ್ಷಿಸಬೇಕು. ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕಾದ ಮಕ್ಕಳಿಗೆ ಉದ್ಯೋಗ ಆಸೆ ತೋರಿಸಿ, ಮಾರಾಟ ಮಾಡುವ ಕೃತ್ಯ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದು ಮಾನವ ಹಕ್ಕುಗಳಿಗೆ ಎಸಗಿದ ದ್ರೋಹವಾಗಿದೆ. ಹುಟ್ಟಿದ ಪ್ರತಿಯೊಬ್ಬ ಮಕ್ಕಳಿಗೂ ಬದುಕುವ ಹಕ್ಕಿದೆ. ಇಂತಹ ಹಕ್ಕನ್ನು ಒದಗಿಸಿಕೊಡುವ ಹೊಣೆಗಾರಿಕೆ ಪ್ರತಿಯೊಬ್ಬರಿಗೂ ಇದೆ. ಆದರೆ, ಹಣಕ್ಕಾಗಿ ಕೆಲವರು ಮಕ್ಕಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿರುವ ಜಾಲ ಎಲ್ಲೆಡೆ ಹರಡಿದೆ. ಇಂತಹ ಜಾಲವನ್ನು ಭೇದಿಸಿ ಮಕ್ಕಳನ್ನು ರಕ್ಷಣೆ ಮಾಡುತ್ತಿರುವ ಪೊಲೀಸರಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ಸಮಿತಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಮಕ್ಕಳನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎನ್.ಪ್ರಕಾಶ್, ವಕೀಲರ ಸಂಘದ ಅಧ್ಯಕ್ಷ ಗಂಗರಾಜು, ಪ್ರಧಾನ ಕಾರ್ಯದರ್ಶಿ ಕೆ.ಎಸ್.ಮೋಹನ್ ಕುಮಾರ್, ವಕೀಲ ಎಸ್.ಎನ್. ಮಧು, ಕ್ಯಾತನಹಳ್ಳಿ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಸಿ.ಎಂ.ಲಿಂಗರಾಜು, ಮುಖ್ಯ ಶಿಕ್ಷಕ ಚಲುವೇಗೌಡ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net