ಶಿವಪುರ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ಪರಿಶೀಲನೆ

 ಮದ್ದೂರು ಪಟ್ಟಣದಲ್ಲಿರುವ ಶಿವಪುರದಲ್ಲಿರುವ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಬುಧವಾರ ಭೇಟಿ ನೀಡಿ, ಘಟಕದ ಕಾರ್ಯನಿರ್ವಹಣೆ ಹಾಗೂ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಚಂದ್ರಶೇಖರ್, ಅರ್ಚನಾ ಇತರರು ಇದ್ದರು.
ಮದ್ದೂರು ಪಟ್ಟಣದಲ್ಲಿರುವ ಶಿವಪುರದಲ್ಲಿರುವ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಬುಧವಾರ ಭೇಟಿ ನೀಡಿ, ಘಟಕದ ಕಾರ್ಯನಿರ್ವಹಣೆ ಹಾಗೂ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಚಂದ್ರಶೇಖರ್, ಅರ್ಚನಾ ಇತರರು ಇದ್ದರು.
Published on

ಮದ್ದೂರು: ಸ್ವಚ್ಛ ಭಾರತ್ ಮಿಷನ್ (ನಗರ)-2.0 ಯೋಜನೆಯಡಿ ಘನ ತ್ಯಾಜ್ಯ ನಿರ್ವಹಣೆ ನಿಯಮಗಳು, 2026ರ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕುಮಾರ ಬುಧವಾರ ನಗರದಲ್ಲಿರುವ ಶಿವಪುರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ, ಘಟಕದ ಕಾರ್ಯನಿರ್ವಹಣೆ ಹಾಗೂ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಯನ್ನು ಪರಿಶೀಲಿಸಿದರು.

ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸಿ, ವೈಜ್ಞಾನಿಕವಾಗಿ ಸಂಸ್ಕರಿಸಿ, ಮರುಬಳಕೆ ಹಾಗೂ ಸುರಕ್ಷಿತ ವಿಲೇವಾರಿ ಮಾಡುವುದಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಸಂಬಂಧಿಸಿದ ನಿಯಮಗಳು ಮತ್ತು ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಿದರು.
ಕಾಮಗಾರಿಯನ್ನು ನಿಗದಿತ ಗುಣಮಟ್ಟದಲ್ಲಿ ತ್ವರಿತವಾಗಿ ಪೂರ್ಣಗೊಳಿಸಿ, ಪ್ರಗತಿ ವಿವರಗಳನ್ನು ಜಿಲ್ಲಾ ಮಟ್ಟದ ಸ್ವಚ್ಛತಂ ಪೋರ್ಟಲ್‌ನಲ್ಲಿ ದಾಖಲಿಸಿ ಸಲ್ಲಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಯೋಜನಾ ನಿರ್ದೇಶಕರು, ಜಿಲ್ಲಾ ನಗರ ಅಭಿವೃದ್ಧಿ ಕೋಶ ಚಂದ್ರಶೇಖರ್, ಪರಿಸರ ಇಂಜಿನಿಯರ್ ಅರ್ಚನಾ, ಹಾಗೂ ಸಂಬಂಧಪಟ್ಟ ಪುರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net