ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ಶಿವಯೋಗಿ ಸಿದ್ದರಾಮೇಶ್ವರ ಅವರು ಒಬ್ಬ ಕಾಯಕ ಯೋಗಿಯಾಗಿ, ಜ್ಞಾನ ಯೋಗಿಯಾಗಿ ವಚನಗಳ ಮೂಲಕ ಹಲವಾರು ಕೊಡುಗೆಗಳು ಮತ್ತು ಸಂದೇಶಗಳನ್ನು ನೀಡುವ ಮೂಲಕ ಜನಮನದಲ್ಲಿ ಉಳಿದಿದ್ದಾರೆ ಎಂದು ಹೇಳಿದರು.