ಶಿವಪುರ ಧ್ವಜ ಸತ್ಯಾಗ್ರಹಸೌಧ ಸಮಗ್ರ ಅಭಿವೃದ್ಧಿ

ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರೋಟರಿ ಕ್ಲಬ್, ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಶಾಸಕರಾದ ಕೆ.ಎಂ.ಉದಯ್, ದಿನೇಶ್ ಗೂಳಿಗೌಡ ಚಾಲನೆ ನೀಡಿದರು. ಎ.ಲೋಕೇಶ್, ಕೆ.ಪ್ರವೀಣ್, ಚನ್ನಂಕೇಗೌಡ, ಸಂತೋಷ್ ಗೌಡ ಇದ್ದರು.
ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರೋಟರಿ ಕ್ಲಬ್, ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಶಾಸಕರಾದ ಕೆ.ಎಂ.ಉದಯ್, ದಿನೇಶ್ ಗೂಳಿಗೌಡ ಚಾಲನೆ ನೀಡಿದರು. ಎ.ಲೋಕೇಶ್, ಕೆ.ಪ್ರವೀಣ್, ಚನ್ನಂಕೇಗೌಡ, ಸಂತೋಷ್ ಗೌಡ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಉದಯ್ ಭರವಸೆ
  • 10ನೇ ತಾಲೂಕು ಸಾಹಿತ್ಯ ಸಮ್ಮೇಳನದ ಸಮಾರೋಪ
ಮದ್ದೂರು: ಸ್ವಾತಂತ್ರೃ ಹೋರಾಟದ ಕುರುಹು ಶಿವಪುರ ಧಜ್ವ ಸತ್ಯಾಗ್ರಹಸೌಧಕ್ಕೆ ಶೀಘ್ರವಾಗಿ ಕಾರ್ಯಕಲ್ಪ ಒದಗಿಸುವ ಉದ್ದೇಶದಿಂದ ಪ್ರತ್ಯೇಕವಾಗಿ ಪ್ರತಿಷ್ಠಾನ ಸ್ಥಾಪಿಸುವ ಜತೆಗೆ, ನಗರದಲ್ಲಿ ಹೊಸದಾಗಿ ಕನ್ನಡ ಭವನ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಗುರುವಾರ ಆಯೋಜಿಸಿದ್ದ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಸಮ್ಮೇಳನದಲ್ಲಿ ಶಿವಪುರ ಧ್ವಜ ಸತ್ಯಾಗ್ರಹಸೌಧ ಸಮಗ್ರ ಅಭಿವೃದ್ಧಿ ಹಾಗೂ ಕನ್ನಡ ಭವನ ನಿರ್ಮಾಣ ಮಾಡುವಂತೆ ಹಲವರು ಮನವಿ ಮಾಡಿದ್ದಾರೆ. ಆದ್ದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
10ನೇ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಹಾಗೂ ಅರ್ಥಪೂರ್ಣವಾಗಿ ನಡೆಯಲು ಸಹಕರಿಸಿದ ಸರ್ವರಿಗೂ ಅವರು ಅಭಿನಂದನೆ ತಿಳಿಸಿದರು.
ಸಾಹಿತಿ ಜಗದೀಶ್ ಕೊಪ್ಪ ಮಾತನಾಡಿ, ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳು ಹರಿಯುವ ನೀರಿನಲ್ಲಿ, ಬಿಸುವ ಗಾಳಿಯಲ್ಲಿ ಬರೆಯುವ ನಿಯಮಗಳಾಗಿವೆ. ಸಮ್ಮೇಳನಗಳು ಒಂದು ದಿನದ ಉತ್ಸವ, ಮಾಧ್ಯಮಗಳ ಪ್ರಚಾರಕ್ಕೆ ಸೀಮಿತವಾಗಬಾರದು. ಅದು ನೆನಪು ಮಾತ್ರ. ಅದರಿಂದಾಚೆಗೂ ಯೋಚನೆ ಮಾಡಬೇಕು. ಮುಂದಿನ ತಲೆ ಮಾರಿಗೂ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್‌ಗೌಡ ಮಾತನಾಡಿ, ಉತ್ತಮ ಪುಸ್ತಕಗಳನ್ನು ಓದುವುದರಿಂದ ಜ್ಞಾನ ವೃದ್ಧಿಸುವ ಜತೆಗೆ ಒಳ್ಳೆಯ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ಆದ್ದರಿಂದ ಪ್ರತಿಯೊಬ್ಬರು ಪುಸ್ತಕಗಳನ್ನು ಓದುವ ಪರಿಪಾಠ ರೂಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ಸಮ್ಮೇಳನಾಧ್ಯಕ್ಷೆ ಡಾ.ಎಂ.ಕೆಂಪಮ್ಮ, ಕಸಾಪ ತಾಲೂಕು ಅಧ್ಯಕ್ಷ ಸುನಿಲ್‌ಕುಮಾರ್, ನಿವೃತ್ತ ಪ್ರಾಂಶುಪಾಲ ಪ್ರೊ.ಬಿ.ಕೃಷ್ಣ, ಪದಾಧಿಕಾರಿಗಳಾದ ಶಿವನಂಜಯ್ಯ, ಕೆ.ಪಿ.ಶ್ರೀಧರ್, ಡಿ.ಈರಯ್ಯ, ಎಚ್.ಕೆ.ಆನಂದ್, ಬಿ.ವಿ.ಹಳ್ಳಿ ನಾರಾಯಣ್, ಮಾಜಿ ಅಧ್ಯಕ್ಷ ಸಿ.ಅಪೂರ್ವಚಂದ್ರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net