ಸಿದ್ದರಾಮಯ್ಯ ನಾಗಮಂಗಲದಲ್ಲಿ ಅದ್ದೂರಿ ಸ್ವಾಗತ

ಕೆ.ಆರ್.ಪೇಟೆಗೆ ತೆರಳುವ ಮಾರ್ಗ ಮಧ್ಯೆ ನಾಗಮಂಗಲ ಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಎನ್.ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಕೋರಿದರು.
ಕೆ.ಆರ್.ಪೇಟೆಗೆ ತೆರಳುವ ಮಾರ್ಗ ಮಧ್ಯೆ ನಾಗಮಂಗಲ ಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಎನ್.ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಕೋರಿದರು.
Published on
ನಾಗಮಂಗಲ: ಬೆಂಗಳೂರಿನಿಂದ ಕೆ.ಆರ್.ಪೇಟೆಗೆ ತೆರಳುವ ಮಾರ್ಗ ಮಧ್ಯೆ ನಾಗಮಂಗಲ ಪಟ್ಟಣಕ್ಕೆ ಶನಿವಾರ ಬೆಳಗ್ಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ಎನ್.ಚಲುವರಾಯಸ್ವಾಮಿ ಹಾಗೂ ಪಕ್ಷದ ಮುಖಂಡರು ಅದ್ದೂರಿ ಸ್ವಾಗತ ಕೋರಿದರು.
ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರ 86ನೇ ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಗಮಂಗಲ ಮಾರ್ಗವಾಗಿ ಕೆ.ಆರ್.ಪೇಟೆಗೆ ತೆರಳುತ್ತಿದ್ದರು. ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರುವ ಸಲುವಾಗಿ ಎನ್.ಚಲುವರಾಯಸ್ವಾಮಿ ಪಟ್ಟಣದಲ್ಲಿ ವಾಸ್ತವ್ಯ ಹೂಡಿದ್ದರು. ಮಧ್ಯಾಹ್ನ 12.20ರ ವೇಳೆಗೆ ಪಟ್ಟಣದ ಮಂಡ್ಯ ವೃತ್ತಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಶಾಲು ಹೊದಿಸಿ, ಹಾರ ಹಾಕಿ ಸ್ವಾಗತಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಜಯಘೋಷ ಮೊಳಗಿಸಿದರು. ನೆರೆದಿದ್ದ ಜನರತ್ತ ಕೈ ಬೀಸಿ ಕೃತಜ್ಞತೆ ಸಲ್ಲಿಸಿದ ಸಿದ್ದರಾಮಯ್ಯ, ಚಲುವರಾಯಸ್ವಾಮಿ ಅವರನ್ನು ತಮ್ಮ ಕಾರಿನಲ್ಲೇ ಕೂರಿಸಿಕೊಂಡು ಕೆ.ಆರ್.ಪೇಟೆಗೆ ತೆರಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಮುಖಂಡರಾದ ಎಚ್.ಟಿ.ಕೃಷ್ಣೇಗೌಡ, ಶರತ್‌ರಾಮಣ್ಣ, ಗೀತಾ ದಾಸೇಗೌಡ, ಚಿಕ್ಕಮ್ಮ, ಸಾವಿತ್ರಮ್ಮ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net