ಅರ್ಹ ನಾಗರಿಕರು, 18 ವರ್ಷ ಪೂರೈಸಿರುವ ಯುವ ಮತದಾರರು, ಮದುವೆ ಅಥವಾ ಇತರೆ ಕಾರಣಗಳಿಂದ ಸ್ಥಳಾಂತರಗೊಂಡಿರುವವರು ಸೇರಿದಂತೆ ಎಲ್ಲ ಅರ್ಹರು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಮನೆಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳು ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಿದ್ದು, ಸಾರ್ವಜನಿಕರು ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಸಲ್ಲಿಸಬೇಕು. ಹೆಸರು ಸೇರ್ಪಡೆ, ವಿಳಾಸ ಬದಲಾವಣೆ, ಫೋಟೋ ನವೀಕರಣ ಸೇರಿದಂತೆ ಅಗತ್ಯ ತಿದ್ದುಪಡಿಗಳನ್ನು ಪ್ರಕ್ರಿಯೆ ಮೂಲಕ ಮಾಡಿಕೊಳ್ಳಬಹುದು ಎಂದು ತಿಳಿಸಿದರು.