ಅಕ್ಕ ಕೆಫೆಯಲ್ಲಿ ಶುಚಿ, ರುಚಿಕರ ಆಹಾರ: ಶಾಸಕ ಪಿ.ರವಿಕುಮಾರ್ ಗಣಿಗ ಮಾಹಿತಿ

ಮಂಡ್ಯ ನಗರದ ಜಿಪಂ ಕಚೇರಿ ಸಮೀಪ ಅಕ್ಕ ಕೆಫೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಾಸಕ ಪಿ.ರವಿಕುಮಾರ್ ಗಣಿಗ ಮಾಹಿತಿ ಪಡೆದರು.
ಮಂಡ್ಯ ನಗರದ ಜಿಪಂ ಕಚೇರಿ ಸಮೀಪ ಅಕ್ಕ ಕೆಫೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಾಸಕ ಪಿ.ರವಿಕುಮಾರ್ ಗಣಿಗ ಮಾಹಿತಿ ಪಡೆದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಪಂ ಕಚೇರಿ ಸಮೀಪ ಜಾಗ ಪರಿಶೀಲನೆ

ಮಂಡ್ಯ:

ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವುದರೊಂದಿಗೆ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ನಗರದಲ್ಲಿ ನೂತನವಾಗಿ ’ಅಕ್ಕ ಕೆಫೆ’ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಮೀಪ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಉತ್ತೇಜನ ನೀಡುವ ಜತೆಗೆ ಸಾರ್ವಜನಿಕರಿಗೆ ಗುಣಮಟ್ಟದ, ಶುಚಿ ಹಾಗೂ ರುಚಿಕರ ಆಹಾರ ಮತ್ತು ತಿಂಡಿ-ತಿನಿಸುಗಳನ್ನು ಕೈಗೆಟಕುವ ದರದಲ್ಲಿ ಒದಗಿಸುವುದು ’ಅಕ್ಕ ಕೆಫೆ’ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ಮಹಿಳೆಯರು ಸ್ವಂತ ಆದಾಯ ಗಳಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪೂರಕವಾದ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ’ಅಕ್ಕಾ ಕೆಫೆ’ ಮಹತ್ವದ ಹೆಜ್ಜೆಯಾಗಲಿದೆ. ವಿಶೇಷವಾಗಿ ಮಹಿಳೆಯರ ಕೌಶಲವನ್ನು ಸಮರ್ಪಕವಾಗಿ ಬಳಸಿಕೊಂಡು ಅವರಿಗೆ ನಿರಂತರ ಆದಾಯದ ಮೂಲ ಕಲ್ಪಿಸುವ ಆಶಯವನ್ನು ಯೋಜನೆ ಹೊಂದಿದೆ. ಆಹಾರ ತಯಾರಿಕೆ, ನಿರ್ವಹಣೆ, ಗ್ರಾಹಕ ಸೇವೆ ಸೇರಿದಂತೆ ಕೆಫೆಯ ವಿವಿಧ ಚಟುವಟಿಕೆಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಆದ್ಯತೆ ನೀಡುವ ಮೂಲಕ ಅವರ ಆರ್ಥಿಕ ಸಬಲೀಕರಣಕ್ಕೆ ಪೂರಕ ವಾತಾವರಣ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಸಾರ್ವಜನಿಕರಿಗೆ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಶುಚಿ ಮತ್ತು ರುಚಿಕರವಾದ ಆಹಾರ, ಉಪಾಹಾರ ಹಾಗೂ ತಿಂಡಿ-ತಿನಿಸುಗಳನ್ನು ಕಡಿಮೆ ದರದಲ್ಲಿ ಒದಗಿಸುವುದು ’ಅಕ್ಕಾ ಕೆಫೆ’ಯ ಮತ್ತೊಂದು ಪ್ರಮುಖ ಆಶಯವಾಗಿದೆ ಎಂದು ವಿವರಿಸಿದರು.
ಸಾಮಾನ್ಯ ಜನರು, ವಿದ್ಯಾರ್ಥಿಗಳು, ಕಾರ್ಮಿಕರು, ನೌಕರರು ಸೇರಿದಂತೆ ವಿವಿಧ ವರ್ಗದ ಜನರಿಗೆ ಕೈಗೆಟಕುವ ದರದಲ್ಲಿ ಉತ್ತಮ ಆಹಾರ ದೊರೆಯುವಂತೆ ಕೆಫೆಯನ್ನು ರೂಪಿಸುವ ಉದ್ದೇಶವಿದೆ. ಅಕ್ಕಾ ಕೆಫೆ ಮೂಲಕ ಒಂದೆಡೆ ಮಹಿಳೆಯರಿಗೆ ಉದ್ಯೋಗ ಮತ್ತು ಸ್ವಾವಲಂಬನೆಯ ಅವಕಾಶ ದೊರೆಯಲಿದ್ದು, ಮತ್ತೊಂದೆಡೆ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಶುಚಿ, ರುಚಿಕರ ಹಾಗೂ ಗುಣಮಟ್ಟದ ಆಹಾರ ದೊರೆಯಲಿದೆ. ಈ ಯೋಜನೆಯು ಮಹಿಳಾ ಸಬಲೀಕರಣದ ಕಡೆಗೆ ಮತ್ತೊಂದು ಹೆಜ್ಜೆಯಾಗಲಿದೆ. ಮಹಿಳೆಯರಿಗೆ ಉದ್ಯೋಗಾವಕಾಶ ಸೃಷ್ಟಿಸುವುದು, ಅವರ ಕೌಶಲಕ್ಕೆ ಸೂಕ್ತ ವೇದಿಕೆ ಒದಗಿಸುವುದು ಹಾಗೂ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಆಶಯದೊಂದಿಗೆ ರೂಪುಗೊಳ್ಳಲಿರುವ ಅಕ್ಕ ಕೆಫೆ, ಮಂಡ್ಯ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣದ ಕಡೆಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಲಿದೆ. ಸಾರ್ವಜನಿಕ ಸ್ನೇಹಿಯಾಗಿ ರೂಪಿಸುವುದರ ಜತೆಗೆ ಮಹಿಳೆಯರಿಗೆ ಗೌರವಯುತ ಉದ್ಯೋಗ ಮತ್ತು ಆರ್ಥಿಕ ಭದ್ರತೆ ಕಲ್ಪಿಸುವ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಿಇಒ ಕೆ.ಆರ್.ನಂದಿನಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net