ಕರ್ನಾಟಕ ಸಂಘ ಅಧ್ಯಕ್ಷ ಡಾ.ಬಿ.ಜಯಪ್ರಕಾಶ್ ಗೌಡ ಮದ್ದೂರು ತಾಲೂಕಿನ ಜನಪ್ರತಿನಿಧಿಗಳು ಹಾಗೂ ಶಿಕ್ಷಣ ಒಂದು ಮುನ್ನೋಟ ಗ್ರಂಥವನ್ನು ಬಿಡುಗಡೆಗೊಳಿಸಲಿದ್ದಾರೆ. ಚುಂಚಶ್ರೀ ಗೆಳೆಯರ ಬಳಗದ ಅಧ್ಯಕ್ಷ ಡಾ.ಬಿ.ಕೃಷ್ಣ ಪ್ರಾಸ್ತಾವಿಕ ಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಮನ್‌ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಟಿ ರವಿಕುಮಾರ್, ಸಾಹಿತಿ ತೈಲೂರು ವೆಂಕಟಕೃಷ್ಣ, ನಿವೃತ್ತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರೇಗೌಡ, ಮಹಿಳಾ ಸರ್ಕಾರಿ ಕಾಲೇಜು ಪ್ರಾಂಶುಪಾಲ ಪ್ರೊ.ಸಿ.ರವಿ ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು, ಮುಖಂಡರು ಭಾಗವಹಿಸುವುದಾಗಿ ಹೇಳಿದರು.