ಬಳಿಕ ಮಾತನಾಡಿ, ರೈತರ ಅನುಕೂಲಕ್ಕಾಗಿ ಸೋಲಾರ್ ಪ್ಲಾೃಂಟ್ ಅಳವಡಿಸಲಾಗುತ್ತಿದ್ದು, ಇದರಿಂದ ರೈತರಿಗೆ ಹಗಲು ಹೊತ್ತಿನಲ್ಲೇ ವಿದ್ಯುತ್ ಲಭ್ಯವಾಗುವ ಪರಿಣಾಮ ರಾತ್ರಿ ವೇಳೆಯಲ್ಲಿ ಜಮೀನುಗಳಿಗೆ ನೀರು ಹಾಯಿಸುವುದು ತಪ್ಪುತ್ತದೆ. ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೇಲುಕೋಟೆ, ಚಿನಕುರಳಿ ಮತ್ತು ದುದ್ದ ಹೋಬಳಿಗಳಿಗೆ ಯೋಜನೆ ಮಂಜೂರಾಗಿದ್ದು, ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಯೋಜನೆಯ ಅನುಷ್ಠಾನಕ್ಕಾಗಿ ಅನುದಾನ ಒದಗಿಸಿದೆ ಎಂದು ತಿಳಿಸಿದರು.