ಮೊದಲ ಪಂದ್ಯದಲ್ಲಿ ವಿಗ್ನಾನ್ ವಿಶ್ವವಿದ್ಯಾನಿಲಯ ವಿರುದ್ಧ 80 ರನ್ ಗುರಿಯನ್ನು 8.2 ಓವರ್‌ಗಳಲ್ಲಿ ಬೆನ್ನಟ್ಟಿಸಿ 8 ವಿಕೆಟ್‌ಗಳ ಜಯ ಸಾಧಿಸಿತು. ನಂತರ ಪುದುಚೇರಿ ತಾಂತ್ರಿಕ ವಿಶ್ವವಿದ್ಯಾನಿಲಯ ವಿರುದ್ಧ 7 ವಿಕೆಟ್, ಮಲ್ಲಾರೆಡ್ಡಿ ವಿಶ್ವವಿದ್ಯಾನಿಲಯ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ಮಧುರೈ ಕಾಮರಾಜ್ ವಿಶ್ವವಿದ್ಯಾನಿಲಯ ವಿರುದ್ಧ 44 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು. ಮುಂದಿನ ಪಂದ್ಯದಲ್ಲಿ ಸಿಎಂಆರ್ ವಿಶ್ವವಿದ್ಯಾನಿಲಯ ವಿರುದ್ಧ 150 ರನ್ ಗುರಿಯನ್ನು ರೋಚಕವಾಗಿ ಬೆನ್ನಟ್ಟಿಸಿ 3 ವಿಕೆಟ್ ಜಯ ದಾಖಲಿಸಿತು. ಪ್ರೀ-ಕ್ವಾರ್ಟರ್ ಫೈನಲ್‌ನಲ್ಲಿ ಜೆಪ್ಪಿಯಾರ್ ವಿಶ್ವವಿದ್ಯಾನಿಲಯ ವಿರುದ್ಧ 9 ವಿಕೆಟ್ ಜಯ ಸಾಧಿಸಿತು. ಸೆಮಿಫೈನಲ್‌ನಲ್ಲಿ ಅನ್ನಾ ವಿಶ್ವವಿದ್ಯಾನಿಲಯ ವಿರುದ್ಧ 6 ವಿಕೆಟ್‌ಗಳ ಗೆಲುವು ಪಡೆದು ಫೈನಲ್‌ಗೆ ಪ್ರವೇಶಿಸಿತು. ಅಂತಿಮ ಪಂದ್ಯದಲ್ಲಿ ವಿಟಿಯು ತಂಡವು ಒಸ್ಮಾನಿಯಾ ವಿಶ್ವವಿದ್ಯಾನಿಲಯ ವಿರುದ್ಧ ಹೋರಾಟಮಯ ಪ್ರದರ್ಶನ ನೀಡಿದರೂ, ರನ್ನರ್ಸ್-ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿತು. ತಂಡದ ಈ ಪ್ರದರ್ಶನ ಅಧಿಕಾರಿಗಳು, ತರಬೇತುದಾರರು ಹಾಗೂ ಕ್ರೀಡಾಭಿಮಾನಿಗಳ ಪ್ರಶಂಸೆಗೆ ಪಾತ್ರವಾಯಿತು.