ಕೆಆರ್‌ಎಸ್ ಅಣೆಕಟ್ಟೆ ಭದ್ರತೆ ಪರಿಶೀಲಿಸಿದ ಎಸ್ಪಿ

ಕೆ.ಆರ್.ಎಸ್‌ನ ಕಾವೇರಿ ನೀರಾವರಿ ನಿಗಮದ ಕಾವೇರಿ ಭವನದಲ್ಲಿ ನಿಗಮದ ಅಧಿಕಾರಿಗಳು, ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ಅಧಿಕಾರಿಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಡಾ.ಶೋಭಾರಾಣಿ ಸಭೆ ನಡೆಸಿದರು. ವೆಂಕಟರವಣಪ್ಪ, ಶ್ವೇತಾ, ಕೃಷ್ಣಕುಮಾರ್, ವಿವೇಕಾನಂದ, ಮಾದೇಶ್ ಇತರರಿದ್ದರು.

Published on
ಕೆ.ಆರ್.ಸಾಗರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಬುಧವಾರ ಕೆ.ಆರ್.ಸಾಗರ ಅಣೆಕಟ್ಟೆಗೆ ಭೇಟಿ ನೀಡಿ ಭದ್ರತೆ ಪರಿಶೀಲನೆ ನಡೆಸಿದರು.
ಅಣೆಕಟ್ಟೆಯಲ್ಲಿ ಭದ್ರತೆಗೆ ಸಿಬ್ಬಂದಿ ನಿಯೋಜನೆ, ಸಿ.ಸಿ.ಕ್ಯಾಮರಾಗಳ ಕಾರ್ಯನಿರ್ವಹಣೆ ಪರಿಶೀಲಿಸಿದರು. ಅಣೆಕಟ್ಟೆ ಭದ್ರತೆ ಮತ್ತು ಸುರಕ್ಷತೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಕಾವೇರಿ ನೀರಾವರಿ ನಿಗಮದ ಕಾವೇರಿ ಭವನದಲ್ಲಿ ನಿಗಮದ ಅಧಿಕಾರಿಗಳು ಮತ್ತು ಅಣೆಕಟ್ಟೆ ಭದ್ರತೆಗೆ ನಿಯೋಜನೆಗೊಂಡಿರುವ ಕೈಗಾರಿಕಾ ಭದ್ರತಾ ಪಡೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ವೆಂಕಟರವಣಪ್ಪ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶ್ವೇತಾ, ಶ್ರೀರಂಗಪಟ್ಟಣ ವೃತ್ತದ ಡಿವೈಎಸ್‌ಪಿ ಕೃಷ್ಣಕುಮಾರ್, ಕೆ.ಆರ್.ಸಾಗರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ವಿವೇಕನಂದ, ಕರ್ನಾಟಕ ಕೈಗಾರಿಕಾ ಭದ್ರತ ಪಡೆಯ ಡಿವೈಎಸ್‌ಪಿ ಮಾದೇಶ್, ಇನ್‌ಸ್ಪೆಕ್ಟರ್ ಪ್ರತಾಪ್ ಕುಮಾರ್, ಸಹಾಯಕ ಇಂಜಿನಿಯರ್ ಅಭಿಲಾಷ್, ಪಿಎಸ್‌ಐ ರಮೇಶ್ ಕರ್ಕಿಕಟ್ಟೆ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net