ಈ ವೇಳೆ ಮಹಿಳೆಯರು ತಾಯಿ ಚಾಮುಂಡೇಶ್ವರಿಗೆ ನಿಂಬೆಹಣ್ಣಿನ ಆರತಿ ಬೆಳಗಿದರು. ಮೊದಲ ಆಷಾಡ ಶುಕ್ರವಾರದ ಅಂಗವಾಗಿ ದೇವಾಲಯದಲ್ಲಿ ಜಿ.ಪಂ. ಮಾಜಿ ಸದಸ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್. ರಾಜೀವ್ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಮದ್ದೂರು ಕ್ಷೇತ್ರದ ಶಾಸಕ ಕದಲೂರು ಉದಯ್ ಮತ್ತು ವಿನುತಾ ದಂಪತಿ ದೇವಾಲಯಕ್ಕೆ ಆಗಮಿಸಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯಕ್ಕೆ ಅಸಂಖ್ಯಾತ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.
ಚಾಂಶುಗರ್ಸ್ ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ಮಣಿ, ಕಾರ್ಖಾನೆ ಅಧಿಕಾರಿಗಳಾದ ನಿತೀಶ್, ನಿಂಗಯ್ಯ, ಕ್ಷೇತ್ರಶಿಕ್ಷಣಾಧಿಕಾರಿ ಧನಂಜಯ್, ಮನ್ಮುಲ್ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಪುರಸಭೆ ಮಾಜಿ ಅಧ್ಯಕ್ಷೆ ಕೋಕಿಲಾ ಅರುಣ್, ಮಮತಾ ಶಂಕರೇಗೌಡ ಇತರರಿದ್ದರು.