ಮದ್ದೂರು: ತಾಲೂಕಿನ ಗೆಜ್ಜಲಗೆರೆ ಗ್ರಾಮದಲ್ಲಿರುವ ಶ್ರೀ ಹೂ ಶನೈಶ್ವರ ಸ್ವಾಮಿ ದೇವಸ್ಥಾನದಲ್ಲಿ 3ನೇ ಶ್ರಾವಣ ಮಾಸದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶ್ರಾವಣ ಮಾಸದ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ ಜಡೆ ಮಾದೇಶ್ವರಸ್ವಾಮಿ, ಬಸವನವರ ಪಾದ ಪೂಜೆ ನಂತರ ಮಹಾಮಂಗಳಾರತಿ ನೆರವೇರಿತು. ಮಧ್ಯಾಹ್ನ 1 ಗಂಟೆಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು. ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಪ್ರಧಾನ ಅರ್ಚಕ ಯೋಗೇಶ್ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು. ಗೆಜ್ಜಲಗೆರೆ ಗ್ರಾಮದ ಯಜಮಾನರು, ಗ್ರಾಮಸ್ಥರು ಹಾಗೂ ಅಕ್ಕ-ಪಕ್ಕ ಗಾಮಸ್ಥರು ಹಾಜರಿದ್ದರು.