ಮಾನಸಿಕ, ಶಾರೀರಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ

ಮಳವಳ್ಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಬಿ.ಕೆ.ರವೀಂದ್ರ ಕುಮಾರ್ ಉದ್ಘಾಟಿಸಿದರು. ಯಶೋದಾ, ನಂದೀಶ್, ಶಿವಕುಮಾರ, ಶಿವಪ್ರಸಾದ್, ಪ್ರೊ.ಮಲ್ಲೇಶ್, ಬಿ.ನಾಗೇಶ್, ಡಾ.ಕುಮಾರ್, ಪ್ರೊ. ಅನಿಲ್ ಕುಮಾರ್, ಪ್ರೊ.ಎಚ್.ಅನೂಪ್, ಡಾ.ರಘು, ಮನು ಇದ್ದರು.
ಮಳವಳ್ಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಬಿ.ಕೆ.ರವೀಂದ್ರ ಕುಮಾರ್ ಉದ್ಘಾಟಿಸಿದರು. ಯಶೋದಾ, ನಂದೀಶ್, ಶಿವಕುಮಾರ, ಶಿವಪ್ರಸಾದ್, ಪ್ರೊ.ಮಲ್ಲೇಶ್, ಬಿ.ನಾಗೇಶ್, ಡಾ.ಕುಮಾರ್, ಪ್ರೊ. ಅನಿಲ್ ಕುಮಾರ್, ಪ್ರೊ.ಎಚ್.ಅನೂಪ್, ಡಾ.ರಘು, ಮನು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿ.ಕೆ.ರವೀಂದ್ರ ಕುಮಾರ್ ಅಭಿಮತ
ಮಳವಳ್ಳಿ: ಮನುಷ್ಯನ ಮಾನಸಿಕ ಮತ್ತು ಶಾರೀರಿಕ ಬೆಳವಣಿಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚುಟುವಟಿಕೆ ಸಹಕಾರಿ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ.ರವೀಂದ್ರಕುಮಾರ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ , ಸ್ಕೌಟ್ಸ್ ಮತ್ತು ಗೈಡ್ಸ್, ರೆಡ್‌ಕ್ರಾಸ್ ಹಾಗೂ ಇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ವ್ಯಾಸಂಗ ಅವಧಿಯಲ್ಲಿ ಪಠ್ಯ ಚಟುವಟಿಕೆಗಳ ಜತೆಗೆ ಕ್ರೀಡೆ ಹಾಗೂ ಇತರ ಸಾಂಸ್ಕೃತಿಕ ಕಾರ್ಯಗಳಲ್ಲಿ ಭಾಗವಹಿಸಿ ಕಾಲೇಜಿಗೆ ಉತ್ತಮ ಹೆಸರು ತರುವಂತಾಗಬೇಕು. ಕ್ಷೇತ್ರದ ಶಾಸಕರ ದೂರದೃಷ್ಟಿಯಿಂದ ಉತ್ತಮವಾದ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣವಾಗುತ್ತಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನೂತನ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಎಂ.ಜಿ.ಅಪ್ಪಣ್ಣ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಯಶಸ್ಸು ಕಾಣಬೇಕಾದರೆ ನಿರಂತರತೆ ಮತ್ತು ಪರಿಶ್ರಮ ಇರಬೇಕು ಎಂದು ಸಲಹೆ ನೀಡಿದರು.
ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಬಬ್ರುವಾಹನ, ಪ್ರಾಂಶುಪಾಲೆ ಡಿ.ಯಶೋದಾ, ಅಧೀಕ್ಷಕ ನಂದೀಶ್, ದುಗ್ಗನಹಳ್ಳಿ ಪದವಿ ಪೂರ್ವ ಕಾಲೇಜು ಪ್ರಭಾರ ಪ್ರಾಂಶುಪಾಲ ಶಿವಕುಮಾರ, ಹಿರಿಯ ಮುಖ್ಯ ಶಿಕ್ಷಕ ಎಚ್.ಎನ್.ಶಿವಪ್ರಸಾದ್, ಕ್ರೀಡಾ ಹಾಗೂ ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ. ಕೆ.ಎಲ್.ಮಲ್ಲೇಶ್, ರೋವರ್ಸ್ ಸಮಿತಿ ಸಂಚಾಲಕ ಬಿ.ನಾಗೇಶ್, ಅಧ್ಯಾಪಕ ಕಾರ್ಯದರ್ಶಿ ಡಾ.ಸಿ.ಕುಮಾರ್, ಎನ್ನೆಸ್ಸೆಸ್ಸ್ ಸಂಚಾಲಕ ಪ್ರೊ.ಅನಿಲ್ ಕುಮಾರ್, ಐಕ್ಯೂಎಸಿ ಸಂಚಾಲಕ ಪ್ರೊ.ಎಚ್.ಅನೂಪ್, ರಾಜ್ಯಶಾಸ್ತ್ರ ಉಪನ್ಯಾಸಕ ಡಾ.ರಘು, ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಮನು ಬೆಳಕವಾಡಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net