ಮಹಿಳೆಯರು ಕ್ರೀಡಾಸಕ್ತಿ ಬೆಳೆಸಿಕೊಳ್ಳಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಆಶಾ ಸಲಹೆ

ಮಂಡ್ಯ ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಆಶಾ ಉದ್ಘಾಟಿಸಿದರು.
ಮಂಡ್ಯ ನಗರದ ಸರ್‌ಎಂವಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಆಶಾ ಉದ್ಘಾಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಅಂತಾರಾಷ್ಟ್ರೀಯ ಮಹಿಳಾ ದಿನದ ಆಚರಣೆ
  • ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿಂದ ಆಯೋಜನೆ
ಮಂಡ್ಯ: ಮಹಿಳೆಯರು ಕ್ರೀಡಾಸಕ್ತಿ ಬೆಳೆಸಿಕೊಳ್ಳುವ ಜತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಆಶಾ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣ ಆಯೋಜಿಸಿದ್ದ ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರನ್ನು ಸಬಲೀಕರಣ ಗೊಳಿಸುವ ಮತ್ತು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ, ಹಿರಿಯ ನಾಗರಿಕ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿ ಕೋಮಲ್ಕುಮಾರ್, ನೆಹರು ಯುವ ಕೇಂದ್ರ ಅಧಿಕಾರಿ ಶ್ರುತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net