ಸೌಹಾರ್ದ ಸಂಘದ ನೋಂದಣಿಗೆ ಚರ್ಚೆ: ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಭರವಸೆ

ಮಂಡ್ಯ ನಗರದ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದಿಂದ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ ಚಾಲನೆ ನೀಡಿದರು.
ಮಂಡ್ಯ ನಗರದ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದಿಂದ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ ಚಾಲನೆ ನೀಡಿದರು.
Published on
ಮಂಡ್ಯ: ಜಿಲ್ಲಾ ಸಹಕಾರ ಬ್ಯಾಂಕ್‌ಗೆ ಸೌಹಾರ್ದ ಸಹಕಾರಿ ಸಂಘಗಳ ನೋಂದಣ ಮಾಡಿಕೊಳ್ಳುವ ಸಂಬಂಧ ಆಡಳಿತ ಮಂಡಳಿಯೊಂದಿಗೆ ಚರ್ಚಿಸಲಾಗುವುದು ಎಂದು ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ ಹೇಳಿದರು.
ನಗರದ ಜೆ.ಪಿ ಸ್ಮಾರಕ ವಿದ್ಯಾಸಂಸ್ಥೆ ಆವರಣದಲ್ಲಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ, ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ರಜತ ಮಹೋತ್ಸವದ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ತುಂಬಾ ಜವಾಬ್ದಾರಿಯಿಂದ ಸಹಕಾರಿ ಸಂಘಗಳನ್ನು ನಡೆಸಬೇಕಿದೆ. ಯಾವುದೇ ಅವ್ಯವಹಾರ ನಡೆಯಂತೆ ನೋಡಿಕೊಳ್ಳಬೇಕಿದೆ. ಸೌಹಾರ್ದ ಸಹಕಾರಿ ಸಂಘಗಳಲ್ಲೂ ಇದು ಅನ್ವಯಿಸುತ್ತದೆ ಎಂದು ನುಡಿದರು.
ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ಅಧ್ಯಕ್ಷ ಬಿ.ಟಿ.ಗುರುರಾಜ್ ಮಾತನಾಡಿ, ಎಂಡಿಸಿಸಿ ಬ್ಯಾಂಕ್‌ನೊಂದಿಗೆ ನಾವು ಒಗ್ಗೂಡಬೇಕು ಎನ್ನುವ ಇಚ್ಚೆ ಇದೆ. ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ ನೋಂದಣಿ ಮಾಡಿಸಿ ಸದಸ್ಯತ್ವ ಕೊಡಿಸಿದರೆ ಉತ್ತಮ ಆರ್ಥಿಕ ಪ್ರಗತಿಗೆ ಸಹಕಾರಿಯಾಗುತ್ತದೆ. ಸಂಘಗಳಿಂದ ಸಹಕಾರಿಗಳು ಸಬಲೀಕರಣಗೊಳ್ಳುತ್ತಾರೆ ಎಂದು ಮನವಿ ಮಾಡಿದರು.
ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಜೋಗಿಗೌಡ, ಮೈಸೂರು ಒಕ್ಕೂಟದ ಅಧ್ಯಕ್ಷ ಎಸ್.ಆರ್.ನಾರಾಯಣ್‌ರಾವ್, ಸಹಕಾರ ಮುಂದ್ರಣಾಲಯ ನಿರ್ದೇಶಕ ನಾಗೇಂದ್ರ, ಶಿವರಾಂ, ಬಸವೇಗೌಡ, ವೆಂಕಟೇಶ್‌ಗೌಡ, ದೊರೆಸ್ವಾಮಿ, ಎಚ್.ಎಂ.ಬಸವರಾಜ್, ಕೃಷ್ಣೇಗೌಡ ಮತ್ತಿತರರಿದ್ದರು. ಇದೇ ಸಂದರ್ಭದಲ್ಲಿ ವಿಶ್ವ ಮಹಿಳಾ ದಿನಾಚರಣೆ ಆಚರಿಸಿ ಸಿಹಿ ವಿತರಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net