15ರಂದು ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ

ನಾಗಮಂಗಲ ತಾಲೂಕು ಆದಿಚುಂಚನಗಿರಿ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನೆ ಅಂಗವಾಗಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ನಾಗಮಂಗಲ ತಾಲೂಕು ಆದಿಚುಂಚನಗಿರಿ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನೆ ಅಂಗವಾಗಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
Published on
ನಾಗಮಂಗಲ: ಶ್ರೀ ಗುರು ಭೈರವೈಕ್ಯ ಮಂದಿರದ ಉದ್ಘಾಟನಾ ಮಹೋತ್ಸವದ ಪ್ರಯುಕ್ತ ಮೂರು ದಿನಗಳ ಕಾಲ ಜರುಗುವ ಧಾರ್ಮಿಕ ಕೈಂಕರ್ಯಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಶುಕ್ರವಾರ ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಶ್ರೀ ಕ್ಷೇತ್ರದಲ್ಲಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಮಂದಿರದಲ್ಲಿ ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮೂಲ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಶುಕ್ರವಾರ ಹೋಮ-ಹವನ, ವಿವಿಧ ಬಗೆಯ ಧಾರ್ಮಿಕ ಕಾರ್ಯಗಳು ಜರುಗಿದವು. ವಾಸ್ತುಹೋಮ, ಅಂಕುರಾರ್ಪಣೆ, ರಕ್ಷಾಬಂಧನ ಹಾಗೂ ಕಳಸ ಸ್ಥಾಪನೆ ಮಾಡಲಾಯಿತು. ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಸೇರಿದಂತೆ ವಿವಿಧ ಶಾಖಾ ಮಠಗಳ ಸ್ವಾಮೀಜಿಗಳು, ಭಕ್ತರು ಪಾಲ್ಗೊಂಡಿದ್ದರು.
ಶನಿವಾರ ಪೂರ್ಣಾಹುತಿ, ಆಧಿವಾಸಗಳು, ಕಳಸ ಪೂಜಾ ಹೋಮ ಜರುಗಿದವು. ಏ.12 ರಂದು ಕುಂಭಾಭಿಷೇಕ ನೆರವೇರಲಿದೆ. ಏ.13 ಮತ್ತು 14 ರಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ: ಶ್ರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಗದ್ದುಗೆಯ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಏ.15ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net