ದೇವರಿಗೆ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ನೇರವೇರಿತು. ಭಕ್ತರಿಗೆ ತೀರ್ಥಪ್ರಸಾದ ನೀಡಲಾಯಿತು. ತಾಲೂಕು ದಂಡಾಧಿಕಾರಿ ಡಾ..ಯು.ಆರ್.ಅಶೋಕ್ ಅವರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿದರು. ಗ್ರಾಮಸ್ಥರು ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಹೆಚ್ಚಿನ ಸಂಖ್ಯೆಯ ಭಕ್ತರು ದೇವರ ದರ್ಶನ ಪಡೆದರು. ಅಕ್ಕಿ ಹೆಬ್ಬಾಳು ಕಿರಣ್ ಭಾರೀಘಾಟ್ ತಂಡದಿಂದ ಸುಗಮ ಸಂಗೀತ ನಡೆಯಿತು. ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ, ಟ್ರಸ್ಟಿ ಅನಂತಸ್ವಾಮಿ, ಪಾರಪತ್ತೇದಾರ್ ಅಕ್ಕಿ ಹೆಬ್ಬಾಳು ರಮೇಶ್ ಇದ್ದರು.